ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಭಾರದ ಲೋಹ: ಪರೀಕ್ಷೆಗೆ ಎನ್‌ಜಿಟಿ ಸೂಚನೆ

Date:

Advertisements

ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭಾರದ ಲೋಹ ಅಂಶಗಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಇವುಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಯೋಗಾಲಯದಲ್ಲಿ ಸಮಗ್ರ ವಿಶ್ಲೇಷಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

ಪರಿಸರ ನಿರ್ವಹಣೆ ಹಾಗೂ ನೀತಿ ಸಂಶೋಧನಾ ಸಂಸ್ಥೆಯ (ಎಂಪ್ರಿ) ಅಧ್ಯಯನ ವರದಿಗಳನ್ನು ಉಲ್ಲೇಖಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನ್ಯಾಯಮಂಡಳಿಗೆ ಕಿರು ವರದಿ ಸಲ್ಲಿಸಿದೆ.

ಈ ಸುದ್ದಿ ಓದಿದ್ದೀರಾ? ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

Advertisements

ತರಕಾರಿಗಳ ಮಾಲಿನ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅದರ ಮೂಲದ ಕುರಿತು ರಾಜ್ಯ ಮಟ್ಟದಲ್ಲಿ ಆಳ ಹಾಗೂ ಸಮಗ್ರವಾದ ತನಿಖೆ ನಡೆಸಬೇಕು ಹಾಗೂ ಇದಕ್ಕೆ ವಿವಿಧ ಇಲಾಖೆಗಳ ಸಹಯೋಗ ಪಡೆಯಬೇಕು ಎಂದು ಮಂಡಳಿಯು ವರದಿಯಲ್ಲಿ ತಿಳಿಸಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಎಂಪ್ರಿಯನ್ನು ಪ್ರತಿವಾದಿಗಳನ್ನಾಗಿ ಪೀಠ ಸೇರ್ಪಡೆಗೊಳಿಸಿದೆ. ಭಾರದ ಲೋಹ ವಿಷಯದ ಬಗ್ಗೆ ತಳಮಟ್ಟದ ವಾಸ್ತವ ಸ್ಥಿತಿಯ ಪರಿಶೀಲನೆ ನಡೆಸಬೇಕು ಹಾಗೂ ಎಂಪ್ರಿ ವರದಿಯನ್ನು ಸಮರ್ಪಕವಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದೆ.

ಪ್ರಕರಣವನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸಿರುವ ಪ್ರಧಾನ ಪೀಠವು ವಿಚಾರಣೆಯನ್ನು 2024ರ ಜನವರಿ 10ಕ್ಕೆ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X