ಗದಗ | ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿ: ಸಹಾಯಕ ನಿರ್ದೇಶಕ

Date:

Advertisements

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿಯಾಗಿದೆ. ಹಾಗಾಗಿ ಎಲ್ಲ ಬಡವರ ಏಳಿಗೆಗಾಗಿ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ರೋಣ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರಿಯಾಜ್ ಖತೀಬ್ ಹೇಳಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ಮನರೇಗಾ ಕ್ರಿಯಾ ಯೋಜನೆ ತಯಾರಿಕಾ ಕಾರ್ಯಗಾರದಲ್ಲಿ ಅವರು ಮಾತನಾಡಿದರು. “ಮನರೇಗಾ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ಒಂದು ವರದಾನ. ಗ್ರಾಮೀಣ ಪ್ರದೇಶದ ಕೂಲಿಕಾರರು ಕೆಲಸಕ್ಕಾಗಿ ಅಲೆದಾಡದೇ ತಮ್ಮ ಸ್ವಂತ ಗ್ರಾಮದಲ್ಲಿಯೇ ಬೇಡಿಕೆಯ ಪ್ರಕಾರ 100 ದಿನಗಳ ಖಾತ್ರಿ ಕೆಲಸವನ್ನು ಪಡೆಯಲು ಸಾಧ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿರಿಯ ನಾಗರಿಕರು, ವಿಧವೆಯರು, ವಿಶೇಷ ಚೇತನರಿಗೆ ಮನರೇಗಾ ಯೋಜನೆಯಡಿ ದುಡಿಯಲು ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ” ಎಂದರು.

“ಈ ವರ್ಷದ ಕ್ರಿಯಾ ಯೋಜನೆಯಲ್ಲಿ ತಾಲೂಕಿನಲ್ಲಿ ಒಂದು ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡುವುದು ನಮ್ಮ ಗುರಿಯಾಗಿದೆ. ನಿಸರ್ಗದಿಂದ ನಾವು ತೆಗೆದುಕೊಳ್ಳುವುದು ಮಾತ್ರ ಮಾಡುತಿದ್ದೇವೆ, ಮರಳಿ ಕೊಡತ್ತಿಲ್ಲ. ಗಿಡಗಳನ್ನು ನೆಟ್ಟು ಹಸಿರುಕರಣಕ್ಕೆ ಶ್ರಮಿಸೋಣ” ಎಂದರು.

Advertisements

“ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿ ಪಡಿಸುವ ಕಾಮಗಾರಿಗಳಾದ ನಾಲಾ ಸುಧಾರಣೆ, ಕೆರೆ ಹೂಳೆತ್ತುವುದು, ಬದು ನಿರ್ಮಾಣ ಕೃಷಿ ಹೊಂಡ, ಮಳೆ ನೀರು ಕೊಯ್ಲು, ಅರಣ್ಯೀಕರಣ ಕಾಮಗಾರಿಗಳನ್ನು 65% ವರೆಗೆ ತೆಗೆದುಕೊಳ್ಳಲು ಅವಕಾಶ, ಉಳಿದ 35% ನಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಳಾದ ಕಂಪೌಂಡ್, ಅಡುಗೆ ಕೋಣೆ, ಆಟದ ಮೈದಾನ, ಮಳೆ ನೀರು ಕೊಯ್ಲು, ಭೋಜನಾಲಯ, ಶೌಚಾಲಯ ಸೇರಿದಂತೆ ಶಾಲಾ ಅಭಿವೃದ್ಧಿ ಪಡಿಸುವ ಸಮಗ್ರ ಕಾಮಗಾರಿಗಳನ್ನು ಮಾಡಬೇಕು” ಸೂಚನೆ ನೀಡಿದರು.

ಕಾರ್ಯಾಗಾರದಲ್ಲಿ ಹಲವು ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X