ಡಿಸೆಂಬರ್ 04ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅದಕ್ಕೆ ಪ್ರತಿಯಾಗಿ ಎಂಇಎಸ್ ‘ಮಹಾಮೇಳಾವ್’ ನಡೆಸಲು ಮುಂದಾಗಿದೆ.
ಬೆಳಗಾವಿಯಲ್ಲಿ ಸಭೆ ನಡೆಸಿರುವ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, “ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು ಇದಕ್ಕಿರುವ ತೊಡಕುಗಳನ್ನು ನಿವಾರಿಸಲು ಚರ್ಚೆ ನಡೆಸಿದ್ದೇವೆ” ಎಂದು ತಿಳಿಸಿದ್ದಾರೆ.
ಮಹಾವೇಳಾವ್‌ಗೆ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಎಂಇಎಸ್ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ‘ಮಹಾಮೇಳಾವ್ ನಡೆಸುವ ವಿಷಯವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವರ ಗಮನಕ್ಕೆ ತರಲು ನಿರ್ಧರಿಸಿದ್ದೇವೆ. ಸ್ಥಳವನ್ನು ಶೀಘ್ರ ಅಂತಿಮಗೊಳಿಸುತ್ತೇವೆ ಎಂದಿದ್ದಾರೆ.