ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳಾದ ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ಅವರು ಕರ್ನಾಟಕದ ಕೊಲ್ಲೂರಿನಲ್ಲಿ ಕ್ರಿಕೆಟಿಗ ಶ್ರೀಶಾಂತ್ ಇರುವ ಕ್ರೀಡಾ ಅಕಾಡೆಮಿಯನ್ನು ನಿರ್ಮಿಸುವುದಾಗಿ ಹೇಳಿ 2019 ರ ಏಪ್ರಿಲ್ 25 ರಿಂದ ವಿವಿಧ ದಿನಾಂಕಗಳಲ್ಲಿ 18.70 ಲಕ್ಷ ರೂ. ಪಡೆದಿದ್ದಾರೆ ಎಂದು ಚೂಂಡಾ ಮೂಲದ ದೂರುದಾರರಾದ ಸರೀಶ್ ಗೋಪಾಲನ್ ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ
ಅಕಾಡೆಮಿಯಲ್ಲಿ ಪಾಲುದಾರರಾಗಲು ಅವಕಾಶ ನೀಡುವುದಾಗಿ ಹೇಳಿದ ನಂತರ ಹಣವನ್ನು ಹೂಡಿಕೆ ಮಾಡಿರುವುದಾಗಿ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರೇರೇಪಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಪ್ರಕರಣದಲ್ಲಿ ಶ್ರೀಶಾಂತ್ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ.