ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವದು ಹಾಗೂ ಪ್ರತಿ ತಿಂಗಳು ವೇತನ ಪಾವತಿಸುವುದು ಸೇರಿ, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾ ಘಟಕದಿಂದ ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ.
ರಾಜ್ಯದಲ್ಲಿರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರದ ಚುನಾವಣೆಯಲ್ಲಿ ಪ್ರಣಾಳಿಕೆ ಘೋಷಣೆ ಮಾಡಿದಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಅತಿಥಿ ಉಪನ್ಯಾಸಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕೂಡಲೇ ಇತ್ಯರ್ಥಪಡಿಸಿ ಪ್ರತಿ ತಿಂಗಳು ವೇತನ ಪಾವತಿಗೆ ಕ್ರಮವಹಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಈ ಸಂದರ್ಬದಲ್ಲಿ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾಧ್ಯಕ್ಷ ಡಾ. ಶ್ರೀನಿವಾಸ ಹೋಸಪೇಟೆ, ಈರಣ್ಣ, ಅಮರೇಶ, ವಿಜಯಕುಮಾರ, ಶ್ರೀನಿವಾಸ, ವೆಂಕಟೇಶ ಆಲ್ಕೋಡ,ಮಧೂಸೂಧನ ಚೋಳಪ್ಪ ಸೇರಿದಂತೆ ಅನೇಕ ಉಪನ್ಯಾಸಕರುಗಳು ಭಾಗವಹಿಸಿದ್ದರು.