ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದ್ದಾರು.
ದುಬಾರಿ ಕಷ್ಟಕರ ಬದುಕು ನಡೆಸುವ ಇಂದಿನ ಕಾಲದಲ್ಲಿ ಸರ್ಕಾರಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತವನ್ನು ಹೆಚ್ಚಿಸಬೇಕಿರುವುದು ಅವಶ್ಯವಾಗಿದೆ ಹಾಗೂ ಆಯಾ ಶೈಕ್ಷಣಿಕ ವರ್ಷಗಳಲ್ಲಿ ಶಿಕ್ಷಣಕ್ಕೆ ಅನುಕೂಲವಾಗುವಂತೆ ಶಿಷ್ಯವೇತನ ನೀಡಬೇಕು. ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳ ಶಿಷ್ಯವೇತನ ಕಡಿಮೆ ಮಾಡುವ ಹುನ್ನಾರ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇದು ಸರಿಯಾದ ಕ್ರಮವಲ್ಲ.
ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾರ್ಥಿಗಳ ಶೈಕ್ಷಣಿಕ ವಿಷ್ಯವೇತನ ಹಾಗೂ ಇನ್ನಿತರ ಸೌಲಭ್ಯ ನೀಡುವುದನ್ನು ನಿಲ್ಲಿಸುವುದಾಗಲಿ ಹಾಗೂ ಕಡಿಮೆ ಮಾಡುವ ಯೋಚನೆ ಮಾಡಬಾರದು.
ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೆಟ್ರಿಕ್ ನಂತರದ ಹಾಸ್ಟಲ್‌ಗಳನ್ನು ಹೆಚ್ಚಿಸಬೇಕು. ಜಿಲ್ಲೆಯ ಉಸ್ತುವಾರಿ ಸಚಿವರು, ಎಲ್ಲಾ ಶಾಸಕರು ಡಿಸೆಂಬರ್ ೦4ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿ, ಜಿಲ್ಲೆಯ ವಿದ್ಯಾರ್ಥಿಗಳ ಹಿತ ಕಾಯುವ ಕೆಲಸ ಮಾಡಬೇಕು. ಸರ್ಕಾರಗಳು ಮಕ್ಕಳಿಗೆ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಮಾಡುವುದು ಅಗತ್ಯವಾಗದೆ ಎಂದು ಒತ್ತಾಯಿಸಿದ್ದಾರೆ.