ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಶುಕ್ರವಾರ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ನಗರದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ.