ಬೀದರ್‌ | ಜಾಗತೀಕರಣದ ಪ್ರಭಾವ ಕನ್ನಡ ಭಾಷೆಗೆ ಕಂಟಕ: ಸುರೇಶ ಚನ್ನಶೆಟ್ಟಿ

Date:

Advertisements

ಕನ್ನಡ ಭಾಷೆ ತನ್ನದೇ ಆದ ಐಹಿಹಾಸಿಕ ಪರಂಪರೆ ಹೊಂದಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ನೆಲಕ್ಕಿದೆ. ಆದರೆ, ಇಂದಿನ ಜಾಗತೀಕರಣದ ಕರಿನೆರಳಿನಲ್ಲಿ ಕನ್ನಡ ಭಾಷೆ ಅಳಿವಿನ ಅಂಚಿಗೆ ಬಂದಿರುವುದು ಆತಂಕ ತರಿಸಿದೆ ಎಂದು ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಕಳವಳ ವ್ಯಕ್ತಪಡಿಸಿದರು.

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು 294ನೇ ಶರಣ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಕನ್ನಡ ಉಳಿದರೇ ನಮ್ಮ ಸಂಸ್ಕೃತಿ ಉಳಿಯುತ್ತದೆ. ಹಾಗಾಗಿ ನಮ್ಮ ಮನೆಯಿಂದಲೇ ಕನ್ನಡ ಭಾಷೆ ಬೆಳೆಸಿ ಉಳಿಸುವ ಕೆಲಸ ಆಗಬೇಕು. ಮಕ್ಕಳಿಗೆ ಕಡ್ಡಾಯವಾಗಿ ಕನ್ನಡ ಕಲಿಸಿದರೇ ನಮ್ಮತನ ಉಳಿಯಲು ಸಾಧ್ಯ. ನಿಜಾಂನ ಆಡಳಿತದಲ್ಲಿ ಕನ್ನಡ ಮಾತನಾಡಿದರೆ ಅಪರಾಧ ಎಂಬ ಸಂದಿಗ್ಥ ಸ್ಥಿತಿಯಲ್ಲಿ ಚನ್ನಬಸವ ಪಟ್ಟದ್ದೇವರು ಹೊರಗಡೆ ಉರ್ದು ನಾಮಫಲಕ ಹಾಕಿ ಒಳಗಡೆ ಕನ್ನಡ ಕಲಿಸಿರುವುದು ನಮ್ಮೆಲ್ಲರಿಗೆ ಆದರ್ಶವಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಡಾ.ಸೋಮನಾಥ ನುಚ್ಚಾ ಮಾತನಾಡಿ, “ಗಡಿಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರ ನೇತೃತ್ವದಲ್ಲಿ ನಡೆದ ಚಳವಳಿ, ಹೋರಾಟದ ಪರಿಣಾಮ ಈ ನೆಲ ಅಖಂಡ ಕರ್ನಾಟಕದಲ್ಲಿ ಉಳಿದಿದೆ. ಕನ್ನಡ ಭಾಷೆಗೆ ಐತಿಹಾಸಿಕ ಹಿನ್ನೆಲೆ ಇದೆ. ಎಲ್ಲರೂ ಹೆಚ್ಚಾಗಿ ಕನ್ನಡ ಬಳಸುವ ಮೂಲಕ ಭಾಷೆ ಬೆಳವಣಿಗೆಗೆ ಮುಂದಾಗಬೇಕು” ಎಂದು ತಿಳಿಸಿದರು.

Advertisements

ಸಾನ್ನಿಧ್ಯ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಡಾ.ಚನ್ನಬಸವ ಪಟ್ಟದ್ದೇವರು ಬಸವತತ್ವ-ಕನ್ನಡವನ್ನು ಎರಡು ಕಣ್ಣುಗಳಂತೆ ಕಂಡಿದ್ದರು. ಈ ಭಾಗದಲ್ಲಿ ಬಸವತತ್ವ ಪ್ರಚಾರ, ಪ್ರಸಾರದ
ಜತೆಗೆ ಕನ್ನಡ ಭಾಷೆ ರಕ್ಷಣೆಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಪೂಜ್ಯರ ಚಿಂತನೆ, ಆದರ್ಶ ನಮ್ಮೆಲ್ಲರಿಗೂ ದಾರಿದೀಪವಾಗಿವೆ” ಎಂದರು.

ರಾಜ್ಯ ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮಾ ಆರ್.ಪಾಟೀಲ್ ಅನುಭಾವ ನೀಡಿದರು. ಶಂಕರಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದರು.

ಸಾಧಕರಿಗೆ ಸನ್ಮಾನ:

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕರವೇ ಸ್ವಾಭಿಮಾನಿ ಬಣ ಕಲಬುರಗಿ ವಿಭಾಗೀಯ ಉಸ್ತುವಾರಿ ಅಧ್ಯಕ್ಷ ಸಂಗಮೇಶ ಗುಮ್ಮೆ, ಪತ್ರಕರ್ತ ಪ್ರದೀಪ ಬಿರಾದಾರ್, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಸಂಗಮೇಶ್ವರ ಜ್ಯಾಂತೆ ಮತ್ತು ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಶಾಂತಾ ಶರಣಪ್ಪ ಬೇಲೂರೆ, ಡಾ.ಮಹಾದೇವಮ್ಮಾ ತಾಯಿ ಅವರನ್ನು ಶ್ರೀಮಠದ ಪರವಾಗಿ
ಸನ್ಮಾನಿಸಿ, ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಜಾತಿ ಸಮೀಕ್ಷೆಯ ಪರ-ವಿರೋಧಗಳ ಸುತ್ತಮುತ್ತ…

ಈ ಸಂದರ್ಭದಲ್ಲಿ ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರುಗಳಾದ ಜೈರಾಜ ಕೊಳ್ಳಾ, ಸಂತೋಷ ಬಿಜಿ ಪಾಟಿಲ್, ಗಣೇಶ ಪಾಟೀಲ್, ಸಂಜುಕುಮಾರ ನಾವದಗಿ, ಸತೀಶ ಮಡಿವಾಳ, ರಾಜಕುಮಾರ ಡಾವರಗಾಂವ, ಬಸವರಾಜ ಸಂಪಂಗೆ, ಅನಿಲ ಹಾಲೇಪುರಗೆ, ಸುದೀಪ ತೂಗಾಂವೆ, ದಯಾನಂದ ಸಜ್ಜನಶೆಟ್ಟಿ, ಮಾಳಸ್ಕಾಂತ ವಾಘೆ, ಭದ್ರೇಶ ಸ್ವಾಮಿ, ಸುನಿತಾ ಮಮ್ಮಾ, ಚಂದ್ರಕಲಾ ಡಿಗ್ಗೆ ಸೇರಿದಂತೆ ಹಲವರು ಇದ್ದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X