ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಯಾಕೆ ಹೊಟ್ಟೆ ಉರಿ: ಸಿಎಂ ಸಿದ್ದರಾಮಯ್ಯ

Date:

Advertisements
  • ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ
  • ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡಲ್ಲ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಶಕ್ತಿ ಯೋಜನೆ’ಯ ಶತಕೋಟಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು.

“ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಅದರ ದಾಖಲೆ ಇದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು” ಎಂದರು.

Advertisements

“ಜೂನ್ 11ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

“ಬಸ್ ಪ್ರಯಾಣಿಕರಲ್ಲಿ ಶೇ. 55ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಮುಖ್ಯಮಂತ್ರಿ ತಿಳಿಸಿದರು.

“1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು, ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟಿಕಿಚ್ಚಿಗೆ ಕಾರಣವಾಗಿದೆ” ಎಂದು ಸಿಎಂ ವಿವರಿಸಿದರು.

“ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಯಾಕೆ ಹೊಟ್ಟೆ ಉರಿ” ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಪ್ರಶ್ನಿಸಿದರು.

”ಬಡವರ ಕೈಯ್ಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ” ಎಂದು ವಿವರಿಸಿದರು.

ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲ ವರ್ಗದ ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಸಿಎಂ ತಿಳಿಸಿದರು.

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X