ಬೆಳಗಾವಿ | ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಆಸಕ್ತಿ ತೋರದ ಶಾಸಕ ಅಶೋಕ ಪಟ್ಟಣ

Date:

Advertisements

ಸಿದ್ದರಾಮಯ್ಯನವರ ಸರ್ಕಾರವು ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್‌ಅನ್ನು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಜಾರಿಗೆ ತಂದಿದೆ. ಈ ಯೋಜನೆಯು ಬಹಳಷ್ಟು ಜನಪ್ರಿಯತೆ ಗಳಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರಿಯಾಗಿ ಅನುದಾನ ನೀಡದ ಕಾರಣ ಕೆಲವೆಡೆ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿತ್ತು. ಇದೀಗ, ಕಾಂಗ್ರೆಸ್‌ ಮತ್ತೆ ಅಧಿಕಾರಿಕ್ಕೆ ಬಂದಿದೆ. ಇಂದಿರಾ ಕ್ಯಾಂಟೀನ್‌ಗಳಿಗೆ ಜೀವ ತುಂಬುತ್ತಿದೆ. ಆದರೆ, ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯಲು ಶಾಸಕ ಅಶೋಕ್ ಪಟ್ಟಣ ಮೀನಾಮೇಷ ಎಣಿಸುತ್ತಿದ್ದಾರೆ ಎಂಬ ಆರೋಪಗಳಿವೆ.

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯನ್ನು ಹೊರತು ಪಡಿಸಿ ನಗರಾಭಿವೃದ್ಧಿ ಇಲಾಖೆ ಅಡಿಯಲ್ಲಿ 188 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲು ಸರ್ಕಾರ 154 ಕೋಟಿ ರೂ. ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸರ್ಕಾರವು ಈ ವಿಷಯದಲ್ಲಿ ಇನ್ನೂ ಸ್ವಲ್ಪ ದೊಡ್ಡ ಮನಸ್ಸು ಮಾಡಬೇಕಾಗಿದೆ. ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿ, ಹಸಿದವರ ಹೊಟ್ಟೆ ತುಂಬಿಸುವ ಕಾರ್ಯಕ್ಕೆ ಮತ್ತೊಂದು ಹೆಜ್ಜೆಯನ್ನು ಮುಂದಿಡಬೇಕಾಗಿದೆ.

ತಾಲೂಕು ಕೇಂದ್ರಗಳಿಗೆ ಪ್ರತಿನಿತ್ಯ ಸಾವಿರಾರು ಜನರು ಕಚೇರಿ ಕೆಲಸ, ವ್ಯಾಪಾರ, ಶಿಕ್ಷಣಕ್ಕಾಗಿ ಬರುತ್ತಾರೆ. ಹೀಗೆ ತಾಲೂಕು ಕೇಂದ್ರಗಳಿಗೆ ಬರುವ ಜನತೆ ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಹೆಚ್ಚು ಹಣ ಕೊಟ್ಟು ಊಟ-ತಿಂಡಿ ತಿನ್ನುವುದು ನಿಜವಾಗಿಯೂ ಹೊರೆಯಾಗುತ್ತದೆ. ಅದರಲ್ಲಿಯೂ ಕಾಲೇಜು ಶಿಕ್ಷಣಕ್ಕಾಗಿ ಗ್ರಾಮೀಣ ಪ್ರದೇಶದಿಂದ ಬರುವ ಬಡ ವಿಧ್ಯಾರ್ಥಿಗಳು ಹಸಿದ ಹೊಟ್ಟೆಯಲ್ಲಿಯೇ ಮರಳಿ ಊರಿಗೆ ಹೊಗುತ್ತಾರೆ.

Advertisements

ಈ ಹಿಂದೆ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 2017ರ ಆಗಸ್ಟ್ 15ರಂದು ಇಂದಿರಾ ಕ್ಯಾಂಟೀನ್ ಯೋಜನೆಗೆ ಚಾಲನೆ ನೀಡಿದ್ದರು. ನಂತರದ ವರ್ಷಗಳಲ್ಲಿ, ಜಿಲ್ಲಾ ಮತ್ತು ತಾಲೂಕು ಕೆಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವುದಾಗಿ ಹೇಳಿದ್ದರು. ಆದರೂ, ಅದು ಹಲವೆಡೆ ಅನುಷ್ಠಾನಕ್ಕೆ ಬರಲಿಲ್ಲ. ರಾಮದುರ್ಗ ಪಟ್ಟಣದಲ್ಲಿ 2018ರಲ್ಲಿಯೇ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಬೇಕಿತ್ತು. ಆ ಸಮಯದಲ್ಲಿ ಕಾಂಗ್ರೆಸ್‌ನ ಅಶೋಕ್ ಪಟ್ಟಣ ಅವರೇ ಶಾಸಕರಾಗಿದ್ದರು. ಆದರೂ, ಅವರ ಇಚ್ಛಾಶಕ್ತಿಯ ಕೊರತೆಯಿಂದ ಅಂದು ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗದೆ ಹೊಯಿತು. ಪಕ್ಕದ ಸವದತ್ತಿ ತಾಲೂಕಿನಲ್ಲಿ ಬಿಜೆಪಿ ಶಾಸಕರಿದ್ದರೂ, ಸಹ ಆ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಿದೆ. ಇದು ರಾಮದುರ್ಗ ತಾಲೂಕಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯನವರ ಸರ್ಕಾರವು 188 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಮುಂದಾಗುವ ಮೂಲಕ ಇಂದಿರಾ ಕ್ಯಾಂಟೀನ್‌ಗೆ ಮರು ಜೀವ ನೀಡಿದೆ. ಈ ಅವಧಿಯಲ್ಲಾದರೂ ಶಾಸಕರು ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಿ ಎಂಬುದು ರಾಮದುರ್ಗ ಜನತೆಯ ಆಶಯವಾಗಿದೆ.

ಈ ಕುರಿತು ಈ ದಿನ.ಕಾಮ್ ಜೊತೆ ರಾಮದುರ್ಗ ಪಟ್ಟಣದ ಬೀದಿ ಬದಿಯ ತರಕಾರಿ ವ್ಯಾಪಾರಸ್ಥೆ ಅಲ್ಲಾಬಿ ನದಾಫ್, “ನಾವು ಬೀದಿ ಬದಿಯಲ್ಲಿ ವ್ಯಾಪಾರ ಮಾಡಿ ಜೀವನ ಮಾಡ್ತಿವಿ. ಜಾಸ್ತಿ ದುಡ್ಡು ಕೊಟ್ಟ ನಾಷ್ಟ, ಊಟ ಮಾಡಾಕ ಆಗುದಿಲ್ಲ. ಶಾಸಕರು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಬೇಕು” ಎಂದು ಹೇಳಿದರು.

ಸ್ಥಳಿಯರಾದ ಜಯಶ್ರೀ ನರಗುಂದ ಮಾತನಾಡಿ, “ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುವದರಿಂದ ಬಡವರಿಗೆ ಅನಕೂಲವಾಗಲಿದೆ. ಕಾಲೇಜುಗಳಿಗೆ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳು ಬೆಳಗ್ಗೆ ಸರಿಯಾಗಿ ತಿಂಡಿ ತಿನ್ನದೇ ಬರುತ್ತಾರೆ. ಅವರಿಗೆಲ್ಲ ಇಂದಿರಾ ಕ್ಯಾಂಟೀನ್‌ ತೆರೆದರೆ ಅನುಕೂಲ” ಎಂದು ಹೇಳಿದ್ದಾರೆ.

ಎಳನೀರು ವ್ಯಾಪಾರಿ ಜಹಾಂಗಿರ್ ಮಾತನಾಡಿ, “ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ, ಬೀದಿ ಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುತ್ತದೆ. ಹೊರಗಡೆ ಹೋಟೆಲ್ ಗಳಲ್ಲಿ 70ರಿಂದ 80 ರೂ. ಕೊಟ್ಟು ಊಟ ಮಾಡಬೇಕಾಗುತ್ತದೆ. ಆದಷ್ಟು ಬೇಗನೆ ಶಾಸಕರು ಇಂದಿರಾ ಕ್ಯಾಂಟೀನ್ ಸ್ಥಾಪಿಸಲಿ” ಎಂದು ಮನವಿ ಮಾಡಿದ್ದಾರೆ.

ರಾಮದುರ್ಗ ತಾಲೂಕಿನಲ್ಲಿ ನೂರಕ್ಕಿಂತ ಹೆಚ್ಚು ಹಳ್ಳಿಗಳಿದ್ದು, ದಿನನಿತ್ಯ ಸಾವಿರಾರು ಜನರು ತಾಲೂಕು ಕೇಂದ್ರವಾದ ರಾಮದುರ್ಗಕ್ಕೆ ಬರುತ್ತಾರೆ. ಆದ್ದರಿಂದ ಶಾಸಕರು ಇಂದಿರಾ ಕ್ಯಾಂಟೀನ್ ಸ್ಥಾಪಿಸುವುದು ಹೆಚ್ಚು ಅವಶ್ಯಕವಾಗಿದೆ‌. 2018ರ ಅವಧಿಯಲ್ಲಿ ತಮ್ಮದೆ ಪಕ್ಷದ ಸರ್ಕಾರವಿದ್ದಾಗಲೂ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ  ಶಾಸಕ ಅಶೋಕ ಪಟ್ಟಣ ಮುಂದಾಗಲಿಲ್ಲ. ಇವಾಗಲಾದರೂ ಇಂದಿರಾ ಕ್ಯಾಂಟೀನ್ ಸ್ಥಾಪಿಸುವರೇ ಎಂದು ತಾಲೂಕಿನ ಜನತೆ ಕಾಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X