ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಎಐಡಿಎಸ್ಓ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ಆಗ್ರಹಿಸಿದ್ದಾರೆ.
“ಸುಮಾರು 10 -15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾ ನಿರತರಾಗಿರುವ ಅತಿಥಿ ಉಪನ್ಯಾಸಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರವು ತಮ್ಮ ಸೇವಾ ಭದ್ರತೆ ಖಾತ್ರಿಪಡಿಸುವಂತೆ ಹಾಗೂ ನಿಯಮಿತ ವೇತನಕ್ಕಾಗಿ ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅನಾಥ ಮಕ್ಕಳ ತಂಗುದಾಣ ವಿರುದ್ಧ ಪ್ರಕರಣ ದಾಖಲು
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂದು ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.