ಕಾಂಗ್ರೆಸ್ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ ಎಂದು ಬಿಜೆಪಿ ಟೀಕಿಸಿದೆ.
ಮೈಕ್ರೋ ಬ್ಲಾಗಿಂಗ್ ಎಕ್ಸ್ನಲ್ಲಿ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ, ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟವನ್ನು ಬಿಚ್ಚಿಟ್ಟಿದೆ.
ಡಿಕೆ ಶಿವಕುಮಾರ್ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್ನ 447 ಕೋಟಿ ಮೆಗಾ ಹಗರಣದಿಂದ ಡಿಕೆಶಿ ಅವರನ್ನು ಸಂರಕ್ಷಿಸಿದ್ದೂ ಈ ಭ್ರಷ್ಟ ಪೋಷಕ. ಪಿಎಫ್ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಜಾ ಮಾಡಿದ್ದೇ ಈ ಭ್ರಷ್ಟ ಪೋಷಕ ಎಂದು ಸಿದ್ದರಾಮಯ್ಯ ಅವರ ಮೇಲೆ ವಾಗ್ದಾಳಿ ನಡೆಸಿದೆ.
1,700 ಪಿಎಫ್ಐ ಪ್ರಕರಣಗಳನ್ನು ಹಿಂಪಡೆದದ್ದು ಈ ಭ್ರಷ್ಟ ಪೋಷಕ. ಹೈಕಮಾಂಡ್ಗೆ 1,000 ಕೋಟಿ ಕಪ್ಪ ಸಾಗಿಸಿದ ಎಂಎಲ್ಸಿ ಗೋವಿಂದರಾಜು ಅವರನ್ನು ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ. ಖಡಕ್ ಅಧಿಕಾರಿ ಅನುರಾಗ್ ತಿವಾರಿ, ಗಣಪತಿ ಅವರನ್ನು ಸಾವಿಗೆ ತಳ್ಳಿ ಕುಚುಕು ಗೆಳೆಯ ಕೆ.ಜೆ. ಜಾರ್ಜ್ ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ. ಇಜಿಎಲ್ ಅಕ್ರಮದಲ್ಲಿ ಕೆ.ಜೆ. ಜಾರ್ಜ್ಗೆ ದಡ ಮುಟ್ಟಿಸಿದ್ದೂ ಈ ಭ್ರಷ್ಟ ಪೋಷಕರೇ ಎಂದು ಕಿಡಿ ಕಾರಿದೆ.
ಕಾಂಗ್ರೆಸ್ ಭ್ರಷ್ಟರ ಕೂಪ, ಇವರ ಹೈಕಮಾಂಡೇ ಮುಖ್ಯ ಅತಿಥಿ. ಹಾಗಾಗಿ, ಸಿದ್ದರಾಮಯ್ಯರವರಿಗೆ ಭ್ರಷ್ಟರ ಸಂಕುಲ ವಿಸ್ತರಣೆ ಪರಮ ಕರ್ತವ್ಯವೂ, ಕಲ್ಯಾಣಕಾರಿಯೂ ಆಗಿರುವುದು ನಾಡಿನ ದುರಂತ ಎಂದು ಆರೋಪಿಸಿದೆ.