ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಹಾಳಾದ ಸರ್ವೀಸ್‌ ರಸ್ತೆ; ಮಣ್ಣು ಸುರಿದ ಅಧಿಕಾರಿಗಳು

Date:

Advertisements
  • ಒಂದೇ ಮಳೆಗೆ ಕೊಚ್ಚಿಹೋದ ಸರ್ವೀಸ್‌ ರಸ್ತೆ
  • ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ಆಗ್ರಹ

ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವೀಸ್‌ ರಸ್ತೆ ಒಂದೆಡೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರ್ವೀಸ್‌ ರಸ್ತೆಯನ್ನು ಸರಿಪಡಿಸುವ ಬದಲಿಗೆ ರಸ್ತೆ ಮೇಲೆ ಕಲ್ಲು–ಮಣ್ಣು ಸುರಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

“ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಾಮನಗರ–ಚನ್ನಪಟ್ಟಣ ಬೈಪಾಸ್‌ ರಸ್ತೆಯ ಬಿಳಗುಂಬ ಅಂಡರ್‌ಪಾಸ್‌ದಲ್ಲಿ (ನೇಟಸ್‌ ಶಾಲೆ ಸಮೀಪ) ಮಳೆ ನೀರು ನಿಲ್ಲುತ್ತದೆ. ಒಂದು ದಿನ ಸುರಿದ ಮಳೆಯ ರಭಸಕ್ಕೆ ಇಲ್ಲಿನ ಸರ್ವೀಸ್‌ ರಸ್ತೆಯು ಹತ್ತಾರು ಅಡಿಗಳವರೆಗೆ ಭಾಗಶಃ ಕೊಚ್ಚಿ ಹೋಗಿದೆ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿತ್ತು ಹೋದ ಈ ರಸ್ತೆಯ ಫೋಟೊಗಳನ್ನು ಪ್ರಯಾಣಿಕರೊಬ್ಬರು ತಮ್ಮ ಫೇಸುಬುಕ್ ಖಾತೆಯಲ್ಲಿ ಜಿಪಿಎಸ್‌ ಲೊಕೇಶನ್‌ ಮಾಹಿತಿ ಸಹಿತ ಹಂಚಿಕೊಂಡಿದ್ದರು. ಈ ಫೋಟೊಗಳು ಜಾಲತಾಣದಲ್ಲಿ ಹರಿದಾಡಿದ್ದವು. ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಳಾಗಿದ್ದ ರಸ್ತೆಗೆ ಬೆಳ್ಳಂಬೆಳಿಗ್ಗೆ ಮಣ್ಣು ಸುರಿದು ಮುಚ್ಚಿದ್ದಾರೆ. ಅಲ್ಲಿಂದ ಸ್ವಲ್ಪ ದೂರದಲ್ಲಿಯೇ ರಸ್ತೆ ಇನ್ನಷ್ಟು ಹಾಳಾಗಿದ್ದು, ಅದನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Advertisements

“ರಸ್ತೆ ಹಾಳಾಗಿರುವ ಮಾಹಿತಿ ಸಿಕ್ಕ ಬಳಿಕ ಅಧಿಕಾರಿಗಳು ಸೂಕ್ತವಾಗಿ ರಸ್ತೆ ದುರಸ್ತಿ ಕಾರ್ಯ ಮಾಡಬೇಕಿತ್ತು. ಆದರೆ, ರಸ್ತೆಗೆ ಮಣ್ಣು ಸುರಿದಿದ್ದಾರೆ. ಮತ್ತೊಂದು ಮಳೆ ಸುರಿದರೆ ಅದೂ ಕೊಚ್ಚಿ ಹೋಗುತ್ತದೆ. ಇದರಿಂದ ವಾಹನ ಸವಾರರಿಗೆ ಇನ್ನಷ್ಟು ತೊಂದರೆ ಉಂಟಾಗುತ್ತದೆ. ಹಾಗಾಗಿ ಎಲ್ಲೆಲ್ಲಿ ಸರ್ವೀಸ್ ರಸ್ತೆ ಹಾಳಾಗಿದೆ ಎಂಬುದನ್ನು ಗುರುತಿಸಿ ರಸ್ತೆ ದುರಸ್ತಿ ಮಾಡುವ ಕೆಲಸ ನಡೆಯಬೇಕು” ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X