ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಅವರು, “ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ” ಎಂದು ಪ್ರಶ್ನಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಅಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೇ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪರಿಗಣಿಸದೇ ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ತೀರ್ಮಾನಿಸಿದ್ದ ಸಿದ್ದರಾಮಯ್ಯ ಸರ್ಕಾರ ಡಿಕೆಶಿ ಮೇಲಿನ ಪ್ರಕರಣವನ್ನು ಸಿಬಿಐಯಿಂದ ವಾಪಸ್ ಪಡೆಯಲು ನಿರ್ಧರಿಸಿದೆ.
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ @siddaramaiahನವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ @DKShivakumar ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ…
— R. Ashoka (ಆರ್. ಅಶೋಕ) (@RAshokaBJP) November 25, 2023