ತುಮಕೂರು | ಕಂಬಳ ನೋಡಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ: ಮಂಗಳೂರಿನ ಇಬ್ಬರು ಸಾವು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.

ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ (ನ.26 ರಂದು) ಮುಂಜಾನೆ ಈ ದುರಂತ ಸಂಭವಿಸಿದೆ.

ಮಂಗಳೂರಿನ ಬಜಪೆ ಮೂಲದ ಕಿಶನ್ ಶೆಟ್ಟಿ (20), ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲಿಪ್ ನೇರಿ ಲೋಬೋ(32) ಮೃತ ದುರ್ದೈವಿಗಳು. ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisements

ಏನಿದು ಘಟನೆ?

ಕಂಬಳ ವೀಕ್ಷಿಸಲೆಂದೇ ಮಂಗಳೂರಿನಿಂದ ಐವರು ಸೇರಿ ಬೆಂಗಳೂರಿಗೆ ಕಾರಿನಲ್ಲಿ ಆಗಮಿಸಿದ್ದಾರೆ. ಕಂಬಳ ನೋಡಿಕೊಂಡು ತಮ್ಮ ಊರುಗಳಿಗೆ ವಾಪಸ್ ಆಗುವ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್‌ವೆಲ್‌ ಕೊರೆಯುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಕಿಶನ್ ಶೆಟ್ಟಿ ಹಾಗೂ ಅವರ ಸ್ನೇಹಿತರು ನೆಲಮಂಗಲ ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ, ದಾರಿ ತಪ್ಪಿ ತುಮಕೂರಿಗೆ ಹೋಗಿ ಬಳಿಕ ಹೆಬ್ಬೂರು ಮಾರ್ಗವಾಗಿ ಕುಣಿಗಲ್ ನಿಂದ ಮಂಗಳೂರಿಗೆ ತೆರಳುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯ ಒದಗಿಸಿ: ನೈಜ ಹೋರಾಟಗಾರರ ವೇದಿಕೆ

ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಕಾರು ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕುಣಿಗಲ್‌ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X