ಜಾತಿ ಗಣತಿ ಯಾರ ಪರ, ಯಾರ ವಿರೋಧ ಇಲ್ಲ: ಚಲುವರಾಯಸ್ವಾಮಿ

Date:

Advertisements
  • ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಾರೆ
  • ಭ್ರೂಣ ಹತ್ಯೆ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ: ಭರವಸೆ

ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಾರೆ. ಜಾತಿ ಗಣತಿ ಯಾರ ಪರ, ಯಾರ ವಿರೋಧ ಇಲ್ಲ. ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆ ಈ ಸರ್ಕಾರದಲ್ಲಿ ಇಲ್ಲ ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಾರೆ. ಬೇರೆ ಬೇರೆ ಕಾರಣಕ್ಕೆ ಆಯಾ ಸಮಾಜದವರು ಆತಂಕದಲ್ಲಿ ಹೇಳಬಹುದು. ನನಗೆ ಸಿದ್ದರಾಮಯ್ಯನವರ ಮೇಲೆ ನಂಬಿಕೆ ಇದೆ. ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಜಾರಿಗೊಳಿಸುತ್ತಾರೆ” ಎಂದರು.

ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ಭ್ರೂಣ ಹತ್ಯೆ ಪತ್ತೆ ಪ್ರಕರಣದ ಬಗ್ಗೆ ಮಾತನಾಡಿ, ‘ಗೃಹ  ಸಚಿವ ಡಾ.ಜಿ.ಪರಮೇಶ್ವರ್‌ ಈ ಬಗ್ಗೆ ಗಮನ ಹರಿಸುತ್ತಾರೆ. ಸೂಕ್ತ ಕ್ರಮವಾಗುತ್ತದೆ, ಎಲ್ಲದಕ್ಕೂ ಕಡಿವಾಣ ಹಾಕಲಾಗುವುದು. ವಿಪಕ್ಷಗಳು ಈ ಹಿಂದೆ ಆಡಳಿತ ಮಾಡಿದಾಗ ಇದಕ್ಕೆ ಕಡಿವಾಣ ಹಾಕಿಲ್ಲ. ನಾವು ಮಾಡುವಾಗ ಮಾಹಿತಿ ನೀಡಿ ಪ್ರೋತ್ಸಾಹ ಕೊಡುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ಟೀಕೆಗೆ ಮುಂದಾಗುತ್ತಾರೆ’ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

“ಈ ಕಾಲದಲ್ಲೂ ಈ ತರಹದ ಕೆಲಸ ಮಾಡಿದ್ದಾರೆ ಅಂದರೆ ನಂಬಕ್ಕಾಗಲ್ಲ. ಈ ಕಾಲದಲ್ಲೂ ಈ ರೀತಿ ನಡೆದಿರುವುದು ದೊಡ್ಡ ಅಪರಾಧ. ಎಲ್ಲಾ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ, ತಕ್ಕ ಶಿಕ್ಷೆಯಾಗಲಿ. ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X