- ಮೂರು ತಿಂಗಳು ಕಾಲಾವಕಾಶ ಕೊಡುವಂತೆ ಆಗ್ರಹ
- ಪಿಎಸ್‌ಐ ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಸೋಮವಾರ ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜನತಾ ದರ್ಶನದ ಹಿನ್ನೆಲೆಯಲ್ಲಿ 20 ಕೌಂಟರ್‌ಗಳನ್ನು ತೆರೆಯಲಾಗಿದ್ದು, ನೂರಕ್ಕೂ ಹೆಚ್ಚು ಅಧಿಕಾರಿಗಳು ಇರಲಿದ್ದಾರೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಜನರ ಸಮಸ್ಯೆಗಳು ಹಾಗೂ ಅವಹಾಲುಗಳನ್ನು ದಾಖಲೀಕರಣಗೊಳಿಸಲು ಹಲವು ತಂಡಗಳಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪಿಎಸ್‌ಐ ಪರೀಕ್ಷಾರ್ಥಿಗಳು ಆಗಮಿಸಿ, ಪರೀಕ್ಷೆ ಮುಂದೂಡುವಂತೆ ಮನವಿ ನೀಡಲು ಮುಂದಾದರು. ಕೆಲವರು ಪ್ರತಿಭಟನೆಗೆ ಮುಂದಾದರು. ಕೂಡಲೇ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದ ಪಿಎಸ್‌ಐ ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ
ದಿನಾಂಕ ಮುಂದೂಡುವಂತೆ ಆಗ್ರಹ
ಡಿ. 23ಕ್ಕೆ ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ದಿನಾಂಕ ನಿಗದಿಯಾಗಿದೆ. ಈ ವಿಚಾರವಾಗಿ ಪರೀಕ್ಷಾರ್ಥಿಗಳಿಂದ ವಿರೋಧ ವ್ಯಕ್ತವಾಗಿದೆ. ಏಕಾಏಕಿ ದಿನಾಂಕ ನಿಗದಿ ಸರಿಯಲ್ಲ. 3 ತಿಂಗಳು ಕಾಲಾವಕಾಶ ಕೊಡುವಂತೆ ಆಗ್ರಹಿಸುತ್ತಿದ್ದಾರೆ.
“ಪಿಎಸ್‌ಐ ಪರೀಕ್ಷೆ ಅಕ್ರಮ ಬಯಲಿಗೆ ಎಳೆದಿದ್ದು ನಾವು. ಈ ಸರ್ಕಾರ ಅಧಿಕಾರಕ್ಕೆ ಬರಲು ನಮ್ಮ ಪಾತ್ರ ದೊಡ್ಡದು. ಪರೀಕ್ಷೆಗೆ ಕೇವಲ 30 ದಿನಗಳ ಕಾಲಾವಕಾಶ ನೀಡಿದ್ದಾರೆ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕು” ಎಂದು ಪರೀಕ್ಷಾರ್ಥಿಗಳು ಆಗ್ರಹಿಸಿದರು.