ಇಂಡಿ | ಸಂವಿಧಾನ ಸಮರ್ಪಣಾ ದಿನಾಚರಣೆ; ಸಂವಿಧಾನ ಪೂರ್ವ ಪೀಠಿಕೆ ಓದಿದ ಮಕ್ಕಳು

Date:

Advertisements

ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್‌ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.

ಈ ವೇಳೆ ಮಾತನಾಡಿದ ಲಕ್ಷ್ಮೀ ದ್ರಾವಿಡ, ಇಂದು ನಮ್ಮ ದೇಶಕ್ಕೆ ಬಾಬಾ ಸಾಹೇಬರು ಸಂವಿಧಾನ ಬರೆದುಕೊಟ್ಟ ದಿನ. ಭಾರತ ಸಂವಿಧಾನವನ್ನು ಬರೆಯಲು ಎರಡು  ವರ್ಷ, 11 ತಿಂಗಳು, 18 ದಿನಗಳು  ತೆಗೆದುಕೊಂಡಿತು.

ದೇಶದ ಎಲ್ಲ ಸಾಧನೆಗಳಿಗೂ ಸಂವಿಧಾನವೇ ಅಡಿಪಾಯ. ಶಿಕ್ಷಣ, ಸಂಘಟನೆ, ಹೋರಾಟವೇ ನಮ್ಮ ಗುರಿ. ಹೆಣ್ಣುಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯ ಬಿಡಬೇಡಿ. ನಾಲ್ಕು ಅಕ್ಷರಗಳ ಮಧ್ಯ ಬಿಟ್ಟು ಮಕ್ಕಳಲ್ಲಿ ಸಂವಿಧಾನದ ಅರಿವು, ಜಾಗೃತಿ ಮೂಡಿಸಬೇಕು ಎಂದರು.

Advertisements

ಸಂವಿಧಾನದ ದಿನದ ಅಂಗವಾಗಿ ಮಕ್ಕಳಿಗೆ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಬಬಲಾದಿ ಗ್ರಾ.ಪಂ ಸದಸ್ಯರಾದ ಶಾಂತಾಬಾಯಿ ಬನಸೋಡೆ, ಬೌರಮ್ಮ ಬನಸೋಡೆ, ರಮಾಬಾಯಿ ಅಂಬೇಡ್ಕರ್ ಮಹಿಳಾ ಸ್ವಸಹಾಯ ಸಂಘ ಕಾರ್ಯದರ್ಶಿ ಬೈಜಾಬಾಯಿ ಹರಿಜನ, ಯಶೋಧರ ಮಹಿಳಾ ಸ್ವಸಹಾಯ ಸಂಘದ ಸದಸ್ಯರಾದ ಕಸ್ತೂರಿ ಶಿವಶರಣ, ಎಳಬಾಯಿ ಬನಸೋಡೆ, ಗಂಗಾ ಶಿವಶರಣ, ವಿಜಯಲಕ್ಷ್ಮಿ ಬನಸೋಡೆ, ವಿದ್ಯಾ ಶಿವಶರಣ, ರೇಣುಕಾ ದಶವಂತ್, ಪುಂಡಲೀಕ ಶಿವಶರಣ, ಕುಮಾರ ಬನಸೋಡೆ, ಸಂಗಮೇಶ್ ಶಿಂಗೆ, ಎಲ್ಲಪ್ಪ ಬನಶೋಡೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X