ಮಂಡ್ಯ | ಹೆಣ್ಣುಭ್ರೂಣ ಹತ್ಯೆ ಪ್ರಕರಣ ಹೆಚ್ಚಳ; ಆರೋಗ್ಯಾಧಿಕಾರಿಗಳ ವಿರುದ್ಧ ಆರೋಪ

Date:

Advertisements

ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಹೆಣ್ಣುಭ್ರೂಣ ಹತ್ಯೆ ಮಾಡಲಾಗುತ್ತಿತ್ತೆಂಬ ವಿಚಾರ ಸದ್ಯ ಬಯಲಾಗಿದೆ. ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ.

“ಮಂಡ್ಯದ ನರ್ಸಿಂಗ್ ಹೋಂಗಳಲ್ಲಿ ಭ್ರೂಣ ಪತ್ತೆ ಮಾಡುತ್ತಿದ್ದರು. 2021ರಲ್ಲೇ ನನಗೆ ಈ ಬಗ್ಗೆ ಮಾಹಿತಿ ಇತ್ತು. ಅದರೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದರು. ಇದೀಗ 100 ಗಂಡು ಮಕ್ಕಳಿದ್ದರೆ, 60 ಮಂದಿ ಹೆಣ್ಣು ಮಕ್ಕಳಿದ್ದಾರೆ. ಗರ್ಭಪಾತ, ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಏಜೆಂಟ್​ಗಳ ದೊಡ್ಡ ತಂಡವೇ ಇದೆ” ಎಂದು ತಿಳಿಸಿದ್ದಾರೆ.

ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಎಂ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮೊದಲಿಗೆ ಭ್ರೂಣ ಪತ್ತೆ ಮಾಡುತ್ತಾರೆ. ನಂತರ ಹೆಣ್ಣು ಭ್ರೂಣವಾದರೆ ಹಣ ನಿಗದಿ ಮಾಡುತ್ತಾರೆ. ಇದರಲ್ಲಿ ಆಸ್ಪತ್ರೆ ವೈದ್ಯರು ಮತ್ತು ಏಜೆಂಟರ್‌ಗಳ ದೊಡ್ಡ ಜಾಲವೇ ಇದೆ. ನಾನು ಮೆಡಿಕಲ್ ಸ್ಟೋರ್ ಇಟ್ಟಿದ್ದೇನೆ. ಗರ್ಭಪಾತದ ಮಾತ್ರೆ ಕೇಳಿಕೊಂಡು ಮೆಡಿಕಲ್ ಸ್ಟೋರ್​ಗೆ ಬರುತ್ತಿದ್ದರು. ನಾವು ಮಾತ್ರೆಯನ್ನ ಕೊಡುತ್ತಿರಲಿಲ್ಲ. ನಂತರ ಮಂಡ್ಯದಲ್ಲಿ ಏಜೆಂಟ್ ಮೂಲಕ‌ ಗರ್ಭಪಾತ ಮಾಡಿಸಿಕೊಳ್ಳುತ್ತಿರುವುದು ಗೊತ್ತಾಗಿದೆ” ಎಂದು ಹೇಳಿದರು.

Advertisements

“ಗರ್ಭಪಾತಕ್ಕೆ ಓಳಗಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಚಾರ ಮಾಡಿದಾಗ ಹಣ ಕೊಟ್ಟು ಗರ್ಭಪಾತ ಮಾಡಿಸಿರುವುದಾಗಿ ಹೇಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವ ನರ್ಸ್​ಗಳು, ನಿವೃತ್ತಿ ನರ್ಸ್‌ಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೆ ಆರ್ ಪೇಟೆ ಭಾಗದಲ್ಲಿ ಹೆಚ್ಚು ಈ ಕೃತ್ಯ ನಡೆದಿದೆ. ನಗರ ಪ್ರದೇಶದಲ್ಲಿ ಕಡಿಮೆ ನಡೆದಿದೆ. ದುಡ್ಡಿನ ಆಸೆಗಾಗಿ ಹಣವಂತರು ಮನೆಯ ಮಹಿಳೆಯ ಗರ್ಭದಲ್ಲಿ ಹೆಣ್ಣು ಭ್ರೂಣ ಇದೆ ಎಂದು ಸುಳ್ಳುಹೇಳಿ ಗಂಡುಭ್ರೂಣವನ್ನೂ ತೆಗೆದಿರುವ ಘಟನೆಗಳೂ ನಡೆದಿದೆ” ಎಂದು ತಿಳಿಸಿದರು.

“ಈ ಹಿಂದೆ ​ಗರ್ಭಪಾತದ ಮಾತ್ರೆಗಳನ್ನು ಕೊಡುತ್ತಿದ್ದರು. ಸದ್ಯ ಸರ್ಕಾರ ಈ ಮಾತ್ರೆಗಳನ್ನು ಬ್ಯಾನ್ ಮಾಡಿದೆ. ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು. ಆರೋಗ್ಯ ಅಧಿಕಾರಿಗಳು ಸೇರಿದಂತೆ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಕ್ರಮವಾಗಿ ನಿವೇಶನ ಮಾರಾಟ; ಖಾಲಿ ಜಾಗದಲ್ಲಿ ಗುಡಿಸಲು ಹಾಕಿ ಸ್ಥಳೀಯರ ಧರಣಿ

ಶ್ರೀರಂಗಪಟ್ಟಣ ಸದಸ್ಯ ನಂದೀಶ್‌ ಎಸ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಂಡ್ಯ ತಾಲೂಕಿನಲ್ಲಿ ಗರ್ಭಪಾತ, ಹೆಣ್ಣುಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಆದಷ್ಟು ಬೇಗ ಈ ಪ್ರಕರಣ ತನಿಖೆಗೆ ಒಳಪಟ್ಟು ಇಂತಹ ಕೃತ್ಯಗಳಿಗೆ ಕಡಿವಾಣ ಬೀಳಬೇಕು” ಎಂದು ತಿಳಿಸಿದರು.

ಈ ಬಗ್ಗೆ ಈ ದಿನ.ಕಾಮ್‌ ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಸಂಪರ್ಕಿಸಿದ್ದು, “ನಮ್ಮ ಜಿಲ್ಲೆಯಲ್ಲಿ ಯಾವುದೇ ಗರ್ಭಪಾತದ ಪ್ರಕರಣಗಳು ಕಂಡುಬಂದಿಲ್ಲ. ಅಂತಹ ಪ್ರಕರಣಗಳ ಕುರಿತು ನಮ್ಮ ಗಮನಕ್ಕೆ ಬಂದಿಲ್ಲ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X