ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

Date:

Advertisements

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರದ ಮೂಲಕ 108 ಬಾರಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಂದ ತನಿಖಾ ವರದಿ ಕೇಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಡಬ್ಲ್ಯೂಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್, ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದಲ್ಲಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿಗಳು ಜ್ಯಾಮಿತಿಯ ಕೈವಾರದಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ. ಇದೊಂದು ಆಘಾತಕಾರಿ ಪ್ರಕರಣವಾಗಿದ್ದು, ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

Advertisements

ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯೂಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ ಮತ್ತು ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂದು ಪರಿಶೀಲಿಸಲಿದೆ ಎಂದು ಪೋರ್ವಾಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆಯಲ್ಲಿ ನಡೆದ ದಾಳಿಯಲ್ಲಿ ಬಾಲಕನಿಗೆ ಗಾಯದ ಗುರುತುಗಳಿವೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

“ನನ್ನ ಮಗ ಮನೆಗೆ ಹಿಂದಿರುಗಿದ ನಂತರ ಘಟನೆಯ ಬಗ್ಗೆ ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂದು ನನಗೆ ಇನ್ನೂ ತಿಳಿದಿಲ್ಲ. ಶಾಲಾ ಆಡಳಿತ ಮಂಡಳಿಯು ತರಗತಿಯ ಸಿಸಿಟಿವಿ ದೃಶ್ಯಗಳನ್ನು ನನಗೆ ನೀಡುತ್ತಿಲ್ಲ. ಪ್ರಕರಣದ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ” ಎಂದು ತಿಳಿಸಿದರು.

ದೂರು ನೀಡಿದ ನಂತರ ಸಂತ್ರಸ್ತ ವಿದ್ಯಾರ್ಥಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X