ಬೀದರ್‌ | ಭಾರತದ ಸಂವಿಧಾನ ಜನಪರ ಮತ್ತು ಜೀವಪರವಾಗಿದೆ: ಶಿವಾನಂದ ಮೇತ್ರೆ

Date:

Advertisements

ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.

ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಸವಕಲ್ಯಾಣದ ಡಾ. ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಸಂವಿಧಾನ ಆಶಯ ಮತ್ತು ಆದ್ಯತೆ’ ಕುರಿತ ಪ್ರತಿಷ್ಠಾನದ 75ನೇ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

“ಭಾರತೀಯ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಎಲ್ಲರೂ ಅರಿಯಬೇಕಿದೆ. ಶಾಲಾ ಕಾಲೇಜಿನಲ್ಲಿ ಸಂವಿಧಾನದ ಪೀಠಿಕೆ ಬರೀ ವಾಚನವಾಗಬಾದು. ಅದು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ” ಎಂದರು.

Advertisements

ಜಿಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ಧಬಾಲೆ ಮಾತನಾಡಿ, “ಸುಶಿಕ್ಷಿತರೆಲ್ಲರೂ ಸಂವಿಧಾನವನ್ನು ಕಡ್ಡಾಯವಾಗಿ ಓದಲೇಬೇಕು. ಸಾಮಾಜಿಕ, ನಾಗರಿಕ, ವೈಯಕ್ತಿಕ ಮತ್ತು ಸಾರ್ವಜನಿಕ ಜೀವನದ ಮೂಲಭೂತ ಹಕ್ಕುಗಳ ಕುರಿತು ತಿಳುವಳಿಕೆಗೆ ಸಂವಿಧಾನದ ಅರಿವು ಅನಿವಾರ್ಯವಾಗಿದೆ. ಅವಿದ್ಯಾವಂತರಿಗೆ ಸಂವಿಧಾನದ ಮಹತ್ವವನ್ನು ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.

ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, “ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಪಾದಿಸುವ, ರಾಜಕೀಯ, ಆರ್ಥಿಕ, ಸಾಮಾಜಿಕ ಸಂಬಂಧವನ್ನು ಸರ್ಕಾರ ಮತ್ತು ಅಧಿಕಾರಿಗಳ ನಿರ್ವಹಣೆಗೆ ಒಂದು ಚೌಕಟ್ಟಾದ ಸಂವಿಧಾನ ಎಲ್ಲ ಕಾನೂನುಗಳ ತಾಯಿಯಾಗಿದೆ.
ಆಡಳಿತಾತ್ಮಕ, ರಾಜಕೀಯ ನೀತಿಗಳು, ಜನರ ಹಕ್ಕು, ಕರ್ತವ್ಯಗಳ ವಿನ್ಯಾಸವಾದ ಸಂವಿಧಾನ ದೇಶದ ಬಹುತ್ವಕ್ಕೆ ಮತ್ತು ಬಹುಸಂಸ್ಕೃತಿಕತೆಗೆ ಮನ್ನಣೆ ನೀಡಿದೆ” ಎಂದರು.

“ಸಮಾನತೆ, ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸಹಿಷ್ಣುತೆ ಸಂವಿಧಾನದ ತಾತ್ವಿಕತೆಯಾಗಿದೆ. ನಮ್ಮ ನೆಲದಲ್ಲಿ ರಚನೆಗೊಂಡ ವಚನಗಳ ಬಹುತೇಕ ಮತ್ತು ಭಾಗಶಃ ಆಶಯಗಳು ಸಂವಿಧಾನದಲ್ಲಿ ಅಡಕಗೊಂಡಿವೆ. ಬಸವಾದಿ ಶರಣರ ಚಿಂತನೆಗಳಲ್ಲಿ, ಸಂವಿಧಾನದ ಮೂಲ ತತ್ವಗಳಲ್ಲಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾದದಲ್ಲಿ ಹೆಚ್ಚು ಸಾಮ್ಯತೆಗಳಿವೆ” ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಮಲ್ಲಿಕಾರ್ಜುನ ಕಾಂಬಳೆ ಮಾತನಾಡಿ, “ಸಂವಿಧಾನದ ಪರಿಕಲ್ಪನೆಯ ಅರಿವಿಗಾಗಿ, ತಿಳುವಳಿಕೆಗಾಗಿ ಸಂವಿಧಾನ ಸಮರ್ಪಣೆ ದಿನಾಚರಣೆ ಆಚರಿಸಲಾಗುತ್ತಿದೆ. ಎಲ್ಲರಿಗೂ ಅನುಕೂಲವಾಗುವ ಹಕ್ಕು, ಕರ್ತವ್ಯ ನೀಡಿದ ವಿಶ್ವ ಶ್ರೇಷ್ಠ ಸಂವಿಧಾನ ಭಾರತದ್ದು. ಆತ್ಮಬಲ, ನೈತಿಕತೆ, ಸಾಮಾಜಿಕ ಗೌರವ ಸಾಧಿಸಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸಂವಿಧಾನದ ಓದು ಅಗತ್ಯ” ಎಂದರು.

ಹುಲಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಮಾರುತಿ ಕುಮಾರ ಅವರು ನಡೆಸಿದ ಸಂವಿಧಾನ ಕುರಿತು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ3500 ವಿದ್ಯಾರ್ಥಿಗಳು ಭಾಗವಹಿಸಿದ್ದು ದಾಖಲೆಯಾಗಿದೆ.

ಇದೇ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಿಧಾನ ಕುರಿತ ಪ್ರಬಂಧ, ಭಾಷಣ, ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು .

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ಕಾರ್ಯಕ್ರಮದಲ್ಲಿ ಜಾನಪದ ಪರಿಷತ್ ತಾಲೂಕಾ ಅಧ್ಯಕ್ಷ ಶಿವರಾಜ್ ಖಪಲೆ, ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣ, ಉಪಾಧ್ಯಕ್ಷ ಬಸವಕುಮಾರ ಕವಟೆ, ವಲಯ ಅಧ್ಯಕ್ಷ ದೀಪಕ ಪಾಟೀಲ, ಸಿಆರ್ ಸಿ ಧರ್ಮೇಂದ್ರ ಭೋಸ್ಲೆ, ಪತ್ರಕರ್ತ ಮಹೇಶ್ ಹುಲಸೂಕರ್ ಇದ್ದರು. ಡಾ ಮಾರುತಿ ಕುಮಾರ ಸ್ವಾಗತಿಸಿದರು. ಡಾ ಕುಪೇಂದ್ರ ರಾಥೋಡ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X