ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಅವರು ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಕಳೆದ ತಿಂಗಳು ಅಂಬಿಕಾಪತಿ ನಿವಾಸಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಐಟಿ ದಾಳಿ ವೇಳೆ ಅಂಬಿಕಾಪತಿ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂ. ಪತ್ತೆಯಾಗಿತ್ತು. ಈ ಘಟನೆಯಾದ ತಿಂಗಳಲ್ಲೇ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು
ತಮ್ಮ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಬಳಿಕ ಅಂಬಿಕಾಪತಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಹೃದಯಾಘಾತಕ್ಕೆ ಒಳಗಾಗಿ ಅಂಬಿಕಾಪತಿ ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.
ಅಂಬಿಕಾಪತಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ.ರವೀಂದ್ರ ಸಂತಾಪ ಸೂಚಿಸಿದ್ದಾರೆ.