ಅಪಘಾತ ನಡೆದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದೆ, ಗಾಯಗೊಂಡ ವ್ಯಕ್ತಿ ರಸ್ತೆಯಲ್ಲೇ ನೋವಿನಿಂದ ನರಳಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಬಸವರಾಜಪ್ಪ ಎಂಬವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಸ್ಥಳೀಯರು ಕರೆ ಮಾಡಿದ್ದಾರೆ. ಆದರೂ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಂದಿಲ್ಲವೆಂದು ಆರೋಪಿಸಲಾಗಿದೆ.
ಬಸವರಾಜಪ್ಪ ಅವರು ಮಂಗಳವಾರ ಬೆಳಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ, ಕೆಎಸ್‌ಆರ್‌ಟಿಸಿ ಬಸ್ ಬಸವರಾಜಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿತದೆ.
ಅಪಘಾತ ಸ್ಥಳದಲ್ಲಿದ್ದವರು ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸ್ಥಳೀಯರು ಬಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಬಸ್ ಚಾಲಕನ ವಿರುದ್ಧ ಕೂಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.