ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

Date:

Advertisements
  • ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ
  • ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ

ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, “ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿರುವುದಕ್ಕೆ ಶಾಸಕ ಬಸವರಾಜ ಯತ್ನಾಳ್ ಅವರು ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ರಾಜ್ಯ ಸರ್ಕಾರ ಡಿಕೆ ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನುಬಾಹಿರವಾಗಿದ್ದು, ಆದೇಶವನ್ನು ವಾಪಸ್ಸು ಪಡೆದಿದೆ” ಎಂದರು.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಅಂತಿಮಗೊಂಡಿಲ್ಲ

Advertisements

“ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದ ನೇಮಕಾತಿ ಬಗ್ಗೆ ಗೃಹ ಸಚಿವರು ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಧ್ಯಕ್ಷರ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆಯಲಾಗಿಲ್ಲ. ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

ಗುಣಮಟ್ಟದ ಹಾಲು ಪೂರೈಕೆಯಾಗುತ್ತಿದೆ

“ಶಾಲೆಗಳಿಗೆ ಗುಣಮಟ್ಟದ ಹಾಲಿನ ಪೂರೈಕೆಯಾಗುತ್ತಿಲ್ಲ ಎಂದು ಆರೋಪದ ಹಿನ್ನಲೆಯಲ್ಲಿ ಉತ್ತರಿಸುತ್ತಾ, ಸರ್ಕಾರ ಕೆಎಂಎಫ್ ನ ನಂದಿನಿ ಗುಣಮಟ್ಟದ ಹಾಲನ್ನು ಪೂರೈಸುತ್ತಿದೆ” ಎಂದರು.

“ತೆಲಂಗಾಣದಲ್ಲಿ ಕರ್ನಾಟಕದ ಸಾಧನೆ ಬಗ್ಗೆ ಮಾಡಿದ ಪ್ರಚಾರದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಆಕ್ಷೇಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಪ್ರಚಾರಕ್ಕೆ ಕೇಂದ್ರ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಚಾರವನ್ನು ಕೈಬಿಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X