ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

Date:

Advertisements

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮತ್ತು ‌ಕನ್ನಡ, ಉರ್ದು ಕವಿಗೋಷ್ಠಿಯು ನಾಳೆ (ನವೆಂಬರ್ 29) ಸಂಜೆ 6.00ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದು, ʼನೀರೊಳಗಣ ಕಿಚ್ಚುʼ ಕೃತಿಗಾಗಿ ಸಾಹಿತಿ ಡಾ. ಕೆ. ಷರೀಫಾ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಚಿಂತಕ, ಬರಹಗಾರ ಡಾ. ನಟರಾಜ್ ಹುಳಿಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಶಿವಕುಮಾರ ಮಾವಲಿ, ಮುಹಮ್ಮದ್ ಆಝಮ್ ಶಾಹಿದ್, ದೀಪದ ಮಲ್ಲಿ, ಮುನೀರ್‌ ಅಹ್ಮದ್‌ ಜಾಮಿ, ಫರ್ಹನಾಝ್‌ ಮಸ್ಕಿ ಹಾಗೂ ನದೀಮ್ ಫಾರೂಖಿ ಕವಿಗೋಷ್ಠಿಯಲ್ಲಿ ಕನ್ನಡ, ಉರ್ದು ಕವನ ಮಂಡಿಸಲಿದ್ದು, ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2023 11 28 at 3.55.15 PM

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X