- ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದ್ದ ಬಿಜೆಪಿ
- ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಬಿಐ ವಿಚಾರವಾಗಿ ಬಿಜೆಪಿ ನಾಯಕರಿಂದ ಟೀಕೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಡಿಕೆ ಶಿವಕುಮಾರ್ ವಿಚಾರದಲ್ಲಿ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿ, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
“ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು” ಯತ್ನಾಳ್ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿಗಳು, ಸಭೆಗಳಲ್ಲಿ ಭಾಗವಹಿಸಲು ಅನುಮತಿ
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆಗೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲು ಮುಂದಾಗಿದೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಕೋರ್ಟ್ಗೆ ಹೋಗುವುದಾಗಿ ಯತ್ನಾಳ್ ಹೇಳಿದ್ದರು. ಇದೀಗ ಅದರಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.