ಬೀದರ್‌ | ಅಂಗವೈಕಲ್ಯ ದೌರ್ಬಲ್ಯ ಎನ್ನದೆ ಕ್ರೀಡೆಯಲ್ಲಿ ಭಾಗವಹಿಸಿ : ಸುರೇಖಾ

Date:

Advertisements
ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆ ಇರುವಂತೆ ವಿಕಲಚೇತನರಲ್ಲಿಯೂ ಸಹ ಅಪಾರ ಪ್ರತಿಭೆಗಳಿವೆ, ವಿಕಲಚೇತನವು ತಮ್ಮ ದುರ್ಬಲತೆ ಎಂದು ಭಾವಿಸದೆ ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸುರೇಖಾ ಹೇಳಿದರು.
ಮಂಗಳವಾರ ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ಮುಂಬರುವ ವಿಶ್ವ ವಿಕಲಚೇತರ ದಿನಾಚರಣೆ ಅಂಗವಾಗಿ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಈ ಹಿಂದೆ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಅನೇಕ ವಿಕಲಚೇತನರು ತಮ್ಮ ಛಾಪನ್ನು ಮೂಡಿಸುವ ಮೂಲಕ ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ತಾವುಗಳು ಸಹ ಅವರಂತೆ ಉನ್ನತ ಮಟ್ಟಕ್ಕೆ ತಲುಪಬೇಕು. ಕ್ರೀಡೆಯಲ್ಲಿ ಭಾಗವಹಿಸುವದರಿಂದ ಮಾನಸಿಕ ಒತ್ತಡ ಕಡಿಮೆಯಾಗುವದರ ಜೊತೆಗೆ ದೈಹಿಕ ಸದೃಢತೆ ಕಾಪಾಡಿಕೊಂಡು ಆರೋಗ್ಯವಂತ ಜೀವನ ಸಾಗಿಸಲು ಸಾಧ್ಯವಾಗುತ್ತದೆ” ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಮಹೇಶ ಬಿರಾದಾರ ಮಾತನಾಡಿ, “ಎಲ್ಲರೂ ಕೌಶಲ್ಯವೃದ್ಧಿ, ಆರ್ಥಿಕ ವೃದ್ಧಿಗೆ ಒತ್ತು ನೀಡಿದಂತೆ ಕ್ರೀಡೆಗೂ ಸಹ ಒತ್ತು ನೀಡಬೇಕು. ಇಂದಿನ ದಿನಗಳಲ್ಲಿ ಹೆಚ್ಚಿನ ಯುವಕರು ಮೊಬೈಲ್ ಗೀಳಿಗೆ ಬಲಿಯಾಗಿ, ಕ್ರೀಡೆಗಳಲ್ಲಿ ಭಾಗವಹಿಸುವುದು ಕಡಿಮೆಯಾಗುತ್ತಿದೆ. ಇದರಿಂದ ಅಸಾಂಕ್ರಾಮಿಕ ರೋಗಗಳಾದ ಬಿಪಿ, ಶುಗರ್‌ಗೆ ತುತ್ತಾಗುತ್ತಿದ್ದಾರೆ. ಕ್ರೀಡೆಯಲ್ಲಿ ಭಾಗವಹಿಸುವದರಿಂದ ಇಂತಹ ರೋಗಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು” ಎಂದು ಸಲಹೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗೌತಮ ಅರಳಿ ಮಾತನಾಡಿ, “ವಿಕಲಚೇತನರಿಗೆ ಆಯೋಜಿಸುವ ಕ್ರೀಡಾ ಕೂಟದಲ್ಲಿ ಹೆಚ್ಚಿನ ಸಂಖ್ಯೆಯ ವಿಕಲಚೇತನರು ಭಾಗವಹಿಸುವಂತಾಗಬೇಕು ಎನ್ನುವ ಸದುದ್ಧೇಶದಿಂದ ಕೇವಲ ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಈ ಕ್ರೀಡಾ ಕೂಟವನ್ನು ಮುಂದಿನ ವರ್ಷ ಗ್ರಾಮ ಪಂಚಾಯತ, ತಾಲ್ಲೂಕ ಪಂಚಾಯತ್ ಮಟ್ಟದಲ್ಲಿಯೂ ಸಹ ಆಯೋಜಿಸುವ ಉದ್ಧೇಶವಿದೆ” ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಾಗರಾಜ ಮಠ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕ ರಾಘವೇಂದ್ರ ನಾಯಕ, ಅನಿಲ ಬೆಲ್ದಾರ, ಮೊಗಲಪ್ಪಾ, ವಿಕಲಚೇತನ ವಿವಿಧೋದ್ಧೇಶಗಳ ಪುನರ ವಸತಿ ಕಾರ್ಯಕರ್ತರಾದ ಜಗನ್ನಾಥ ಗಾರಿ, ಶಿವಕುಮಾರ ಪಾಟೀಲ, ಬಾಬುರಾವ ರಾಥೋಡ, ಸುನಿಲ್ ಮಲ್ಗೆ, ಬಸವರಾಜ ದೇಶಮುಖ, ದೆವೇಂದ್ರ ನೈಕೋಡಿ, ವಿಕಲಚೇತನರ ಗ್ರಾಮೀಣ ಪುನರ ವಸತಿ ಕಾರ್ಯಕರ್ತರು, ವಿಕಲಚೇತನರ ನಗರ ಪುನರ ವಸತಿ ಕಾರ್ಯಕರ್ತರು, ವಿಕಲಚೇತನ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X