ಚಿತ್ರರಂಗದ ಸಹ ಕಲಾವಿದರು, ತಾಂತ್ರಿಕ ವರ್ಗದವರಿಗೆ ಪಿಂಚಣಿ ಭಾಗ್ಯಕ್ಕೆ ಚಿಂತನೆ: ಡಿ ಕೆ ಶಿವಕುಮಾರ್

Date:

Advertisements
  • ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರ ಮೂಲಕ ಮನವಿ ಬಂದಿದೆ
  • ನಟಿ ಡಾ. ಎಂ.ಲೀಲಾವತಿ ನಿರ್ಮಿಸಿರುವ ಪಶು ಆಸ್ಪತ್ರೆ ಉದ್ಘಾಟನೆ

ಚಿತ್ರರಂಗದ ಸಹ ಕಲಾವಿದರು ಹಾಗೂ ತೆರೆಯ ಹಿಂದಿನ ಇತರೇ ತಾಂತ್ರಿಕ ವರ್ಗದವರಿಗೆ ಪಿಂಚಣಿ ನೀಡುವ ಆಲೋಚನೆ ಸರ್ಕಾರದ ಮುಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಟಿ ಡಾ. ಎಂ.ಲೀಲಾವತಿ ಅವರು ನಿರ್ಮಿಸಿರುವ ಪಶು ಆಸ್ಪತ್ರೆ ಉದ್ಘಾಟನೆಯ ನಂತರ ಅವರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಚಿಕ್ಕ, ಚಿಕ್ಕ ಕಲಾವಿದರಿಗೆ, ತಂತ್ರಜ್ಞರಿಗೆ ಪಿಂಚಣಿ ಕೊಡಿಸಬೇಕು ಎನ್ನುವುದು ಲೀಲಾವತಿ ಅವರ ದೊಡ್ಡ ಕನಸು. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರ ಮೂಲಕ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ನಮ್ಮ ಸರ್ಕಾರ ಮಾಡಲಿದೆ” ಎಂದು ಹೇಳಿದರು.

Advertisements

“ನಮ್ಮ ಕನ್ನಡ ಚಿತ್ರರಂಗದ ನೂರಾರು ಕಲಾವಿದರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡವನ್ನು ಬೆಳಗುವ ಕೆಲಸ ಮಾಡುತ್ತಿದ್ದಾರೆ. ಅನೇಕ ಕಲಾವಿದರು ಇಳಿವಯಸ್ಸಿನಲ್ಲಿ ಕಷ್ಟಪಡುತ್ತಿದ್ದಾರೆ. ನಿರ್ಮಾಪಕರು ಸೇರಿದಂತೆ ಚಲನಚಿತ್ರ ಮಂಡಳಿಯವರ ಸಭೆ ಕರೆದು ಸೂಕ್ತ ತೀರ್ಮಾನಕ್ಕೆ ಬರಲಾಗುವುದು. ಲೀಲಾವತಿ ಅವರ ಮನವಿಯನ್ನು ಶೀಘ್ರ ಪರಿಗಣಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ?‌ ಈ ದಿನ ಸಂಪಾದಕೀಯ | ತಪ್ಪಿದ ಘೋರ ದುರಂತ- ಆಳುವವರ ಅಲಕ್ಷ್ಯ ಅಕ್ಷಮ್ಯ

“ಬೆಂಗಳೂರಿಗೆ ಹತ್ತಿರವಾಗಿರುವ ಜಾಗದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಮಾಡಿರುವುದು ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಪಶುಗಳಿಗೆ ಆಸ್ಪತ್ರೆ ನಿರ್ಮಾಣ ಮಾಡಿ ನಮ್ಮ ಸಮಾಜಕ್ಕೆ ಲೀಲಾವತಿ ಅವರು ಮತ್ತು ಅವರ ಮಗ ವಿನೋದ್ ರಾಜ್ ಅವರು ದೊಡ್ಡ ಸಂದೇಶವನ್ನು ನೀಡಿದ್ದಾರೆ” ಎಂದು ಹೇಳಿದರು.

“ಸ್ಥಳೀಯ ಬಗರ್‌ಹುಕುಂ ಜಮೀನು, ಲೇಔಟ್‌ಗಳು ಸೇರಿದಂತೆ ಈ ಭಾಗದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಅವರ ಮನವಿಗಳಿಗೆ ಸ್ಪಂದಿಸಲಾಗುವುದು. ವಿನೋದ್ ರಾಜ್ ಅವರು ನಮ್ಮ ಸಹೋದರನಿದ್ದಂತೆ. ಆಸ್ಪತ್ರೆ ಉದ್ಘಾಟನೆಗೆ ಡಿ.ಕೆ.ಶಿವಕುಮಾರ್ ಮಾತ್ರ ಬಂದಿಲ್ಲ. ಇಡೀ ಸರ್ಕಾರವೇ ಬಂದಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X