ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35) ಮೃತಪಟ್ಟ ಯುವಕರು. ಇವರು ತಮ್ಮ ಜಮೀನಿನಲ್ಲಿ ಭತ್ತ ಕಟಾವ್ ಮಾಡಿ ರಾಶಿ ಹಾಕಿದ್ದರು. ಕಳೆದ ರಾತ್ರಿ ಮಳೆಯಾಗಿದ್ದರಿಂದ ಭತ್ತವನ್ನು ರಕ್ಷಿಸಲು ಜಮೀನಿಗೆ ತೆರಳಿದ್ದರು. ಈ ಸಂದರ್ಭ ಸಿಡಿಲು ಬಡಿದು ಬೀರು ಮತ್ತು ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಮೀನಿಗೆ ಹೋದ ಸಹೋದರರು ತುಂಬಾ ಹೊತ್ತಾದರೂ ಹಿಂದಿರುಗದ ಹಿನ್ನೆಲೆಯಲ್ಲಿ ಮನೆಮಂದಿ ಜಮೀನಿನ ಬಳಿ ಹುಡುಕಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬ್ಯಾರೇಜಿಗೆ ನೀರು ತುಂಬಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಧರಣಿ
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.