ಶಿವಮೊಗ್ಗ | ಒಣಗಲು ಹಾಕಿದ್ದ ಅಡಕೆ ಕಳ್ಳತನ; ಆರೋಪಿಗಳ ಬಂಧನ

Date:

Advertisements

ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಲ್‌ಗಟ್ಟಲೆ ಅಡಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ‍ಶ್ರೀಧರ್‌ (52) ಬಂಧಿತರು.

ಹರತಾಳು ಮಜಿರೆ ಕ್ವಾಡ್ರಿಗೆ ಗ್ರಾಮದ ಬಾಲರಾಜ್‌ ಎಂಬುವವರ ಮನೆ ಪಕ್ಕದಲ್ಲಿ ನವೆಂಬರ್‌ 16ರಂದು ಒಣಗಿಸಲು ಹಾಕಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು ಕ್ವಿಂಟಲ್ 85 ಕೆಜಿ ಅಡಕೆ, ಕೃತ್ಯಕ್ಕೆ ಬಳಸಿದ್ದ ಲಗೇಜ್‌ ಆಟೋ ವಶಪಡಿಸಿಕೊಂಡಿದ್ದಾರೆ. ಇನ್ನು, ರಿಪ್ಪನ್‌ಪೇಟೆ ಸುತ್ತಮುತ್ತ ಕಳುವಾಗಿದ್ದ 300 ರಬ್ಬರ್‌ ಶೀಟ್‌ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ‘ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ನಿರ್ದೇಶಕನ ಬಿಡುಗಡೆ ಒತ್ತಾಯ

ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಹೊಸನಗರ ಇನ್ಸ್‌ಪೆಕ್ಟರ್‌ ಗುರಣ್ಣ ಹೆಬ್ಬಾಳ್‌ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್‌, ಸಿಬ್ಬಂದಿ ಶಿವಕುಮಾರ್‌ ನಾಯ್ಕ, ಉಮೇಶ್‌ ಮತ್ತು ಸಂತೋಷ್‌ ತಂಡದಲ್ಲಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X