ಬಿಎಲ್‌ ಸಂತೋಷ್‌ಗೆ ಕಡಿವಾಣ ಹಾಕದಿದ್ದರೆ ಬಿಜೆಪಿ ನಾಶ ಖಚಿತ: ಮಾಜಿ ತಾ.ಪಂ ಸದಸ್ಯ

Date:

Advertisements

ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ ಅವರು, “ಯಡಿಯೂರಪ್ಪ ಅವರು ಸೈಕಲ್‌ನಲ್ಲಿ ತಿರುಗಿ ಪಕ್ಷ ಕಟ್ಟಿದ್ದರು. ಅವರನ್ನು ಅಧಿಕಾರದಿಂದ ಕೆಳಗಿಳಿಯುವಂತೆ ಆರ್‌ಎಸ್‌ಎಸ್‌ನ ಬಿ.ಎಲ್‌ ಸಂತೋಷ್ ಮಾಡಿದರು. ಯಡಿಯೂರಪ್ಪ ಕಣ್ಣೀರು ಹಾಕುವಂತೆ ಮಾಡಿದರು” ಎಂದು ಕಿಡಿಕಾರಿದ್ದಾರೆ.

“ಉತ್ತರ ಕರ್ನಾಟಕದ ಪ್ರಭಾವಿಗಳಾದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸಿದರು. ಅವರು ಪಕ್ಷ ತೊರೆಯುವಂತೆ ಮಾಡಿದರು. ಚುನಾವಣೆ ವೇಳೆ, ಯಡಿಯೂರಪ್ಪ ಮತ್ತು ಲಿಂಗಾಯತರ ಅಗತ್ಯವಿಲ್ಲ, ಹಿಂದುತ್ವದ ಹೆಸರಿನಲ್ಲಿ ಮುಂದೆ ಹೋಗುತ್ತೇವೆಂದು ಉದ್ಧಟತನ ತೋರಿದರು. ಹೀಗಾಗಿ, ಚುನಾವಣೆಯಲ್ಲಿ ಮುಣ್ಣು ಮುಕ್ಕಿದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲೂ ಸಂತೋಷ್‌ ಕೈಗೆ ಪಕ್ಷದ ಚುಕ್ಕಾಣಿ ನೀಡಿದರೆ, ಬಿಜೆಪಿಗೆ ಹೀನಾಯ ಪರಿಸ್ಥಿತಿ ಬರುತ್ತದೆ. ರಾಜ್ಯದಲ್ಲಿ ಸಂತೋಷ್‌ ಅವರ ಮಾತಿಗೆ ಮನ್ನಣೆ ಕೊಡದೆ, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಂದೆ ಹೋಗಬೇಕು” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X