ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

Date:

Advertisements

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬೇಸಿಗೆಗೂ ಮೊದಲೇ ಕುಡಿಯಲು ನೀರಿಲ್ಲ. ಇನ್ನು ಬೇಸಿಗೆ ಕಳೆಯುವುದು ಹೇಗೆ ಎಂಬುದು ಇಲ್ಲಿನ ಗ್ರಾಮದ ಜನರ ಆತಂಕ.

ತಾಲೂಕಿನ ದೊಡ್ನಳ್ಳಿ ಗ್ರಾಮದ ಲಂಡಕನಗಳ್ಳಿ, ಬಚಗಾಂವ್ ಭಾಗದಲ್ಲಿ ಈಗಾಗಲೇ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಅಲ್ಲದೇ ಐದು ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಅಲ್ಲದೆ, ಸಮರ್ಪಕವಾದ ರಸ್ತೆಗಳೂ ಇಲ್ಲ.

ಕುಡಿಯುವ ನೀರಿನ ಸಮಸ್ಯೆ ಇದೆ. ಅಗತ್ಯವಿದ್ದಾಗ ನೀರು ಪೂರೈಸುವಂತೆ ಸ್ಥಳೀಯರು ಪಂಚಾಯಿತಿಗೆ ಕೋರಿದ್ದಾರೆ. ಆದರೆ, ಪಂಚಾಯಿತಿ ಪರ್ಯಾಯ ವ್ಯವಸ್ಥೆ ಬಗ್ಗೆ ಈವರೆಗೆ ಕ್ರಮವಹಿಸಿಲ್ಲ. ಈ ಭಾಗದಲ್ಲಿ ರಸ್ತೆಯ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ ಈವರೆಗೆ ಈಡೇರಿಲ್ಲ ಎಂದು ದೂರುತ್ತಾರೆ ಗ್ರಾಮಸ್ಥರು.

Advertisements

ಬಚಗಾಂವ ಗ್ರಾಮದ ಕಾಳೆಹೊಂಡ, ಹಿಟ್ನಗದ್ದೆ ಭಾಗದಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಸಂಖ್ಯೆ ಹೆಚ್ಚಿದ್ದು, ಕುಡಿಯುವ ನೀರಿನ ಸಮಸ್ಯೆ ಇದೆ. ಸರಿಯಾದ ರಸ್ತೆಗಳಿಲ್ಲ. ಇತ್ತೀಚೆಗೆ ನಗರ ಸಮೀಪದ ಲಾಲಗೌಡ ನಗರದಲ್ಲಿ ಕೊಳವೆಬಾವಿ ಕೊರೆದು ನೀರು ಪೂರೈಸುತ್ತಿದ್ದರೂ, ಅದು ಕೆಲವು ಮನೆಗಳಿಗೆ ಮಾತ್ರ ಸೀಮಿತವಾಗಿದೆ.

ಈ ಭಾಗದಲ್ಲಿ ಹಂದಿಗೊಲ್ಲರು ವಾಸವಿದ್ದು, ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದಾರೆ. ಅವರ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸುವ ವ್ಯವಸ್ಥೆ ಆಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X