ಬೀದರ್‌ | ಹೊಸ ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಸಹಕಾರಿ : ಸಚಿವ ಈಶ್ವರ ಖಂಡ್ರೆ

Date:

Advertisements
ಜಿಲ್ಲೆಯಲ್ಲಿ ಸಾಕಷ್ಟು ವಿಶಿಷ್ಟ ಪ್ರತಿಭೆಗಳಿದ್ದು, ಆ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಅರಣ್ಯ ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬುಧವಾರ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಬೀದರ ನಗರದ ಕನ್ನಡ ಸಾಹಿತ್ಯ ಸಂಘ, ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ 2023ರ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
“ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆಗಳಿರುತ್ತವೆ, ಪೋಷಕರು ತಮ್ಮ ಆಸೆಯನ್ನು ಅವರ ಮೇಲೆ ಹೇರದೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತವಾಗದೆ ಕ್ರೀಡೆ, ಸಂಗೀತ, ನೃತ್ಯದಂತಹ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿ ಕಠಿಣ ಪ್ರರಿಶ್ರಮಕ್ಕೆ ಹೆಚ್ಚು ಒತ್ತು ನೀಡಿದರೆ ಎಲ್ಲವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಯುವಜನೋತ್ಸವದಲ್ಲಿ ಆಯ್ಕೆಯಾಗಿ ಮುಂದೆ ರಾಜ್ಯ, ರಾಷ್ಟ್ರಮಟ್ಟಕೆ ಹೋಗುವ ಪ್ರತಿಭೆಗಳಿಗೆ ಬೇಕಾಗುವ ಸಹಕಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೆನೆ” ಎಂದು ಹೇಳಿದರು.
“ಯುವ ಶಕ್ತಿ ಅಣು ಶಕ್ತಿಯಿದ್ದಂತೆ, ಯುವಕರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. 21ನೇ ಶತಮಾನವನ್ನು ಭಾರತದ ಶತಮಾನ ಎನ್ನುತ್ತಾರೆ, ಇದಕ್ಕೆ ಮುಖ್ಯ ಕಾರಣ ಯುವ ಸಮೂಹ, ಪ್ರಸ್ತುತ ಭಾರತವು 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸುಮಾರು 65 ಕೋಟಿ ಜನಸಂಖ್ಯೆ ಹೊಂದಿದ್ದು ಇದು ಚೀನಾ ದೇಶಗಿಂತಲೂ ಹೆಚ್ಚಿದೆ. ಪ್ರಸ್ತುತ ಭಾರತದ ಯುವಕರು ವಿಶ್ವದ ಅನೇಕ ದೇಶಗಳಲ್ಲಿ ಆರೋಗ್ಯ, ತಂತ್ರಜ್ಞಾನ, ಆಡಳಿತ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೊಮ್ಮೆ ನಾವು ಅವರನ್ನು ಭಾರತಕ್ಕೆ ಕರೆಸಿಕೊಂಡಿದ್ದೆ ಆದಲ್ಲಿ ಆ ದೇಶಗಳ ಆಡಳಿತ ಯಂತ್ರವೇ ನಿಂತು ಹೊಗುತ್ತದೆ” ಎಂದರು.
“ಯುವಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು, ಸಾಮಾಜಿಕ ಜಾಲತಾಣದಿಂದ ಕೆಟ್ಟದನ್ನು ಬಿಟ್ಟು ಒಳ್ಳೆಯದನ್ನು ಪಡೆಯಬೇಕು, ನಮ್ಮ ಸುತ್ತಮುತ್ತಲಿನ ಪರಿಸರ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಅದರ ಸಂರಕ್ಷಣೆಗೆ ಮುಂದಾಗಬೇಕು. ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಭೆಗಳು ಮುಂದೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪು ಮುಡಿಸುವಂತಾಗಲಿ” ಎಂದು ಶುಭ ಹಾರೈಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೌತಮ ಅರಳಿ ಮಾತನಾಡಿ, “ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಗೀತೆ, ಜಾನಪದ ನೃತ್ಯ ಸೇರಿದಂತೆ ಎಂಟು ವಿವಿಧ ಸಾಂಸ್ಕೃತಿಕ ಸ್ವರ್ಧೆಗಳನ್ನು ಆಯೋಜಿಸಿದ್ದು, ಈ ಸ್ವರ್ಧೆಯಲ್ಲಿ ಆಯ್ಕೆಯಾದವರು ಮುಂದೆ ರಾಜ್ಯ, ಹಾಗೂ ರಾಷ್ಟ್ರಮಟ್ಟದಲ್ಲಿ ಆಯೋಜಿಸುವ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದರು.
ಕಾರ್ಯಕ್ರಮದಲ್ಲಿ ಬೀದರನ ಶಿವಕುಮಾರ ತಂಡದಿಂದ ಕಂಸಾಳೆ, ರೋಹಿತ ತಂಡದಿಂದ ಜಾನಪದ ಗೀತೆ, ಸುವರ್ಣಾ ತಂಡದಿಂದ ಜಾನಪದ ಗೀತೆ, ಜಾಧವ ತಂಡದಿಂದ ಜಾನಪದ ಗೀತೆ, ಡಿ.ಎಸ್. ಡಯಾನ ತಂಡದಿಂದ ಜಾನಪದ ಗೀತೆ ಹಾಗೂ ಸೂರ್ಯಕಾಂತ, ಅಕ್ಷತಾ, ಗಣೇಶ, ಸಂಚಿತ, ದೀಪಕ, ವೈಶ್ಣವಿ, ಬೀರಪ್ಪ, ಪವನ ಅವರಿಂದ ಗೀತಗಾಯನ ಹಾಗೂ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮೋಹ್ಮದ ಗೌಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಹಾಕಿ ಕೋಚ್ ಮೊಹ್ಮದ್ ಅಬ್ದುಲ್ ಖುದ್ದುಸ್, ತೀರ್ಪುಗಾರರಾದ ಶಿವಕುಮಾರ ಪಂಚಾಳ, ಶಂಭುಲಿಂಗ ವಾಲ್ದೊಡ್ಡಿ, ರಾಣಿ ಸತ್ಯಮೂರ್ತಿ, ಸಂಜಯ, ಸುನಿಲ ಕಡ್ಡೆ, ಸೇರಿದಂತೆ ಕ್ರೀಡಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X