ಚಿಕ್ಕಮಗಳೂರು | ಗ್ರಾಹಕರ ಚಿನ್ನ, ಎಫ್‌ಡಿ ಹಣ ಧೋಖಾ; ಬ್ಯಾಂಕ್‌ ಸಿಬ್ಬಂದಿ ವಂಚನೆ

Date:

Advertisements

ಗ್ರಾಹಕರು ಬ್ಯಾಂಕ್​​ನಲ್ಲಿಟ್ಟಿದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿಗಳೇ ದುರುಪಯೋಗಪಡಿಸಿಕೊಂಡಿದ್ದು, ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರಿನ ಬೋಳರಾಮೇಶ್ವರ ದೇಗುಲದ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.

ಬ್ಯಾಂಕ್​ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಂಚನೆ ಎಸಗಿದ ಆರೋಪಿಗಳು.

ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Advertisements

ಚಿಕ್ಕಮಗಳೂರು ನಗರ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿಗಳೇ ವಂಚನೆ ನಡೆಸಿದ್ದು, ಗ್ರಾಹಕರ ಆಭರಣಗಳನ್ನು ಲಪಟಾಯಿಸಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳು ಆಡಿಟ್‌ ನಡೆಸುವ  ವೇಳೆ ಪ್ರಕರಣ ಬೆಳಕಿ ಬಂದಿದೆ” ಎಂದು ಹೇಳಿದರು.

“ಬ್ಯಾಂಕ್ ಆಡಿಟ್​ನಲ್ಲಿ 141 ಚಿನ್ನದ ಪ್ಯಾಕೆಟ್​ಗಳ ಪೈಕಿ 140 ಪ್ಯಾಕೆಟ್​​ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿದ್ದು, ಇನ್ನು ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವುದೂ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ​ಬೆಂಗಳೂರು ಶಾಖೆಯ ಮ್ಯಾನೇಜರ್​ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ” ಎಂದರು.

ಪೊಲೀಸರು ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಬ್ಯಾಂಕಿಗೆ ಎರಡು ರೀತಿಯಲ್ಲಿ ವಂಚನೆ ಎಸಗಿರುವುದು ಕಂಡುಬಂದಿದೆ. ಆರೋಪಿಗಳು ಮೊದಲೇ ನಕಲಿ ಚಿನ್ನವನ್ನು ತಂದು ಇಟ್ಟುಕೊಂಡಿದ್ದರು. ಆರೋಪಿಗಳು ಗ್ರಾಹಕರಿಂದ ಅಸಲಿ ಚಿನ್ನವನ್ನು ಪಡೆದು ಸಾಲ ನೀಡುತ್ತಿದ್ದರು. ಆದರೆ ಲಾಕರ್​​ನಲ್ಲಿ ಇಡುವಾಗ ಅಸಲಿ ಚಿನ್ನದ ಬದಲು ನಕಲಿ ಚಿನ್ನವನ್ನು ಇಡುತ್ತಿದ್ದರು. ಬಳಿಕ ಅಸಲಿ ಚಿನ್ನವನ್ನು ಬೇರೆ ಕಡೆ ಮಾರುತ್ತಿದ್ದರು ಎಂಬುದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

ಬ್ಯಾಂಕ್ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳು. ಮ್ಯಾನೇಜರ್ ಸಂದೀಪ್ ಪತ್ನಿ ಶ್ವೇತಾ ಹೆಸರಲಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದ್ದಿದ್ದನು. ಇದೇ ರೀತಿಯಾಗಿ ನಾರಾಯಣಸ್ವಾಮಿ ಕೂಡ ಪತ್ನಿ ಲಾವಣ್ಯ ಹೆಸರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ₹50 ಲಕ್ಷ ಸಾಲ ಪಡೆದಿರುವುದು ಕಂಡುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X