ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

Date:

Advertisements
  • ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ
  • ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀ‌ನ್‌ ಸ್ಥಾಪನೆ 

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, “ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀ‌ನ್‌ಗಳನ್ನು ಸ್ಥಾಪಿಸಲಾಗುವುದು” ಎಂದರು.

Advertisements

ಕನಕದಾಸರು -ಸಮಸಮಾಜದ ಕನಸು ಕಂಡಿದ ದಾಸಶ್ರೇಷ್ಠ

“ಕನಕದಾಸರು ಸಮಾಜಸುಧಾರಕರಾಗಿದ್ದರು. ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಮೇಲು ಕೀಳು ಭೇದಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

“ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು” ಎಂದು ತಿಳಿಸಿ,  ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಾಡಿನ ಎಲ್ಲ ಜನತೆಗೆ ಕನಕದಾಸ ಜಯಂತಿಯ ಶುಭಾಶಯಗಳನ್ನು ಕೋರಿದರು.

ಶಾಸಕ ಬಿ ಆರ್ ಪಾಟೀಲ್ ಅವರನ್ನು ಮುಖ್ಯಮಂತ್ರಿಗಳು ಭೇಟಿಯಾಗಿರುವ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬಿ.ಆರ್.ಪಾಟೀಲ್ ಅವರೊಂದಿಗೆ ಚರ್ಚಿಸಲಾಗಿತ್ತು, ಅವರು ಅಧಿವೇಶನಕ್ಕೆ ಆಗಮಿಸಲು ಮನವೊಲಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನಿಮ್ಹಾನ್ಸ್ ನಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲದೇ ರೋಗಿಯೊಬ್ಬರ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಿಮ್ಹಾನ್ಸ್ ನಿರ್ದೇಶಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X