ಧಾರವಾಡ | ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ

Date:

Advertisements

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ಬಳಲುತ್ತಿರುವುದನ್ನು ತಡೆಗಟ್ಟುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ.ಟಿ.ಕೆ ಹೇಳಿದರು.

ನವೆಂಬರ್ 29ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ತಾಲೂಕಾ ಅರೋಗ್ಯಾಧಿಕಾರಿಗಳ ಕಚೇರಿ ಹಾಗೂ ಜೆಎಸ್ಎಸ್ ಹುಕ್ಕೇರಿಕರ್ ಪಿಯುಸಿ ಕಾಲೇಜಿನ ಸಹಯೋಗದಲ್ಲಿ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಹಮ್ಮಿಲೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿ, ರಾಜ್ಯದಲ್ಲಿ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವು ನವೆಂಬರ್ 22, 2023ರಿಂದ ಅನುಷ್ಠಾನಗೊಂಡಿದ್ದು, ಉತ್ತಮ ಆಹಾರ ಸೇವನೆ ಮಾಡಿ, ಅನೀಮಿಯಾದಿಂದ ದೂರವಿರಬೇಕು. ಅನೀಮಿಯಾ ಹೆಚ್ಚಾದಂತೆ ಮಕ್ಕಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಆದ್ದರಿಂದ ಸರ್ಕಾರವು ʼಪರೀಕ್ಷೆ-ಚಿಕಿತ್ಸೆ ಉಚಿತ, ಅನೀಮಿಯಾ ಮುಕ್ತ ಖಚಿತʼ ಎಂಬ ಘೋಷವಾಕ್ಯದೊಂದಿಗೆ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ ಎಂದರು.

Advertisements

ಗರ್ಭಿಣಿಯರಿಗೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ, ಅನುದಾನಿತ ಪಿಯು ಕಾಲೇಜುಗಳ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಎಚ್‌ಬಿ ಲೆವೆಲ್ ಪರೀಕ್ಷಿಸಲಾಗುತ್ತದೆ. ಅನೀಮಿಯಾದಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರ ಸದುಪಯೋಗ ಪಡೆದುಕೊಂಡು ಉಚಿತ ಪರೀಕ್ಷೆ ಮಾಡಿಸಿಕೊಂಡು, ಅಗತ್ಯವಿದ್ದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ್ ಮಾತನಾಡಿ,‌ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವು, ಸದೃಡ ಭಾರತ ನಿರ್ಮಾಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ. ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳು, ಪಿಯು ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಎಚ್.ಬಿ ಲೆವೆಲ್ ಪರೀಕ್ಷೆ ಮಾಡಲಾಗುತ್ತದೆ. ಮಕ್ಕಳು ಅನೀಮಿಯಾದಿಂದ ಬಳಲುತ್ತಿದ್ದಲ್ಲಿ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.

ಜಿಲ್ಲಾ ಆರ್‌ಸಿಎಚ್‌ಒ ಅಧಿಕಾರಿ ಡಾ. ಸುಜಾತಾ ಹಸವಿಮಠ ಮಾತನಾಡಿ, ಮೊದಲ ಹಂತದಲ್ಲಿ ಜಿಲ್ಲೆಯ ಸರಕಾರಿ, ಅನುದಾನಿತ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಎಲ್ಲ ಆರ್‌ಬಿಎಸ್‌ಕೆ ತಂಡಗಳು ನವೆಂಬರ್ 22ರಿಂದ 28ರವರೆಗೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ 90ಕಾಲೇಜುಗಳಲ್ಲಿ ಉಚಿತ ತಪಾಸಣೆ ಕೈಗೊಂಡು 10,524 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿವೆ. ಜಿಲ್ಲೆಯಲ್ಲಿ ಅಂದಾಜು 168ಸರಕಾರಿ ಮತ್ತು ಆರು ಅನುದಾನಿತ ಪಿಯು ಕಾಲೇಜುಗಳಲ್ಲಿ 27,000ವಿದ್ಯಾರ್ಥಿಗಳಿದ್ದಾರೆ ಎಂದು ಅವರು ತಿಳಿಸಿದರು.

ಕಾಲೇಜು ವಿದ್ಯಾರ್ಥಿಗಳ ತಪಾಸಣೆ ಪೂರ್ಣಗೊಂಡ ತಕ್ಷಣ ಪ್ರಾಥಮಿಕ, ಪ್ರೌಢ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳ ತಪಾಸಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮ ನಿರಂತರವಾಗಿ ಮುಂದುವರಿಯುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್. ಹುಕ್ಕೇರಿಕರ್ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಶಾನಭಾಗ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್, ಮದಾರಮಡ್ಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರುಣಾ ಅಸ್ಪೀಕರ್, ಕವಿತಾ ಗಾರ್ಗಿ, ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X