ರಾಯಚೂರು | 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ; ಆರ್‌ಟಿಪಿಎಸ್ ದಾಖಲೆ‌

Date:

Advertisements

ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್‌ಟಿಪಿಎಸ್‌) ಈ ವರ್ಷ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದು, ವಿದ್ಯುತ್ ಸ್ಥಾವರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯುನಿಟ್ ವಿದ್ಯುತ್​ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್​ 21 ರಿಂದ ನವೆಂಬರ್​​​ 29ರವರೆಗೆ 100 ದಿನಗಳ ಕಾಲ 800 ಮೆಗಾವ್ಯಾಟ್​ ವಿದ್ಯುತ್​ ಉತ್ಪಾದನೆಯಾಗಿದೆ ಎಂದು ಆರ್​ಟಿಪಿಎಸ್​​ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

“ಸಾಮಾನ್ಯವಾಗಿ ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆಯು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಇದೀಗ ಶೇ 54.08 ರಷ್ಟು ಘಟಕ 1ರ ಸಾಮಾರ್ಥ್ಯ ಹೆಚ್ಚಾಗಿದೆ” ಎಂದು ಆರ್‌ಟಿಪಿಎಸ್​​​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ತಿಳಿಸಿದ್ದಾರೆ.

ಬೇಡಿಕೆ ಇಲ್ಲದ ಕಾರಣ ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತ್ತು. ಒಂದು, ಎರಡು, ಮೂರು ಮತ್ತು ಆರನೇ ಘಟಕಗಳು ನಿಲುಗಡೆಯಾಗಿದ್ದವು. ರಾಜ್ಯದಲ್ಲಿ ಮಳೆ ಕೊರೆತೆಯಾಗಿ ಬರಗಾಲ ಆವರಿಸಿದ್ದು, ಜಲ ಮೂಲಗಳಿಂದ ವಿದ್ಯುತ್​ ಉತ್ಪಾದನೆಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್​ನಿಂದ ಈ ನಾಲ್ಕರ ಘಟಕಗಳನ್ನು ಆರಂಭಿಸಲಾಗಿದೆ. ತಾತ್ಕಾಲಿಕವಾಗಿ ಘಟಕಗಳು ಸ್ಥಗಿತಗೊಂಡ ಬಳಿಕವೂ ಇಷ್ಟು ಪ್ರಮಾಣದ ವಿದ್ಯುತ್​ ಉತ್ಪಾದನೆ ಗಮನಾರ್ಹವಾಗಿದೆ.

Advertisements

ರಾಯಚೂರು ಶಾಖೋತ್ಪನ್ನ ಕೇಂದ್ರ ರಾಯಚೂರು ಜಿಲ್ಲೆಯ ಯದ್ಲಾಪುರ ಡಿ (ಶಕ್ತಿನಗರ)ಯಲ್ಲಿದೆ. ಇದು ಕಲ್ಲಿದ್ದಲು ಆಧಾರಿತ ವಿದ್ಯುತ್ ಶಕ್ತಿ ಕೇಂದ್ರವಾಗಿದೆ. ಒಟ್ಟು 8 ಉತ್ಪಾದನಾ ಘಟಕಗಳಿವೆ. ಇದನ್ನು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್)‌ ನಿರ್ವಹಿಸುತ್ತದೆ ಮತ್ತು ರಾಜ್ಯದಲ್ಲಿ ಮೊದಲು ಸ್ಥಾಪಿಸಿರುವ ಉಷ್ಣ ವಿದ್ಯುತ್ ಸ್ಥಾವರವಾಗಿದೆ. ವಿದ್ಯುತ್ ಕೇಂದ್ರವು 1985 ರಿಂದ ವಿವಿಧ ಅವಧಿಗಳಲ್ಲಿ ಕಾರ್ಯಾರಂಭ ಮಾಡಿತು. ಇದು ಕರ್ನಾಟಕದಲ್ಲಿ ಉತ್ಪತ್ತಿಯಾಗುವ ಒಟ್ಟು ವಿದ್ಯುತ್‌ನಲ್ಲಿ ಶೇ.70ರಷ್ಟು ಆರ್​ಟಿಪಿಎಸ್ ಪಾತ್ರವಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಘಟಕ 1 ರಿಂದ 7 ರವರೆಗೆ, ಪ್ರತಿ ದಿನಕ್ಕೆ 5.04 ಮಿಲಿಯನ್‌ ಯುನಿಟ್ ವಿದ್ಯುತ್​ ಉತ್ಪಾದಿಸಬಹುದು ಮತ್ತು ಘಟಕ 8 ದಿನಕ್ಕೆ 6 ಮಿಲಿಯನ್‌ ಯುನಿಟ್‌ ವಿದ್ಯುತ್ ಉತ್ಪಾದಿಸಬಹುದು. ಆದ್ದರಿಂದ ಸ್ಥಾವರವು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಿದಾಗ ದಿನಕ್ಕೆ 41.28 ಮಿಲಿಯನ್‌ ಯುನಿಟ್ ಶಕ್ತಿಯನ್ನು ಉತ್ಪಾದಿಸುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X