- ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ
- ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಸಿಕ್ಕಿತ್ತು
ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು” ಎಂದಿದ್ದಾರೆ.
“ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನು ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದಾರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕಷವಾಗಿ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.
ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು.
ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ.
ಇದಕ್ಕೆ…
— Basanagouda R Patil (Yatnal) (@BasanagoudaBJP) November 30, 2023