ಬೆಂಗಳೂರು | ಮಗುವಿಗೆ ಹೃದಯಾಘಾತವಾಗಿದೆ ಎಂದ ನಿಮ್ಹಾನ್ಸ್

Date:

Advertisements

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಒಂದು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮಗುವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಬೆಡ್‌ ಇಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದರು. ಅಲ್ಲದೇ, ಮಗುವಿಗೆ ಹೃದಯಾಘಾತವಾಗಿದೆ. ಮಗುವನ್ನು ಬದುಕಿಸಲು ವೈದ್ಯರು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ” ಎಂದು ನಿಮ್ಹಾನ್ಸ್ ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಮ್ಹಾನ್ಸ್, “ಹಾಸನ ಸರ್ಕಾರಿ ಆಸ್ಪತ್ರೆಯಿಂದ ಮಗುವನ್ನು ನವೆಂಬರ್ 30ರ ಮಧ್ಯಾಹ್ನ 12.45ಕ್ಕೆ ಡಿಸ್ಚಾರ್ಜ್‌ ಮಾಡಿದ್ದಾರೆ. ಮಧ್ಯಾಹ್ನ 2:30ಕ್ಕೆ ನಿಮ್ಹಾನ್ಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬಂದಿದ್ದಾರೆ” ಎಂದು ಹೇಳಿದೆ.

“ನಿಮ್ಹಾನ್ಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಸಿಟಿ ಸ್ಕ್ಯಾನ್ ಮಾಡುವ ವೇಳೆ ಹಲವು ದೋಷಗಳು ಕಂಡು ಬಂದಿದ್ದವು. ಮಧ್ಯಾಹ್ನ 3 ಗಂಟೆಗೆ ಮಗುವಿಗೆ ಹೃದಯಾಘಾತವಾಗಿದೆಎಂದು ತಿಳಿಸಿದೆ.

Advertisements

ಜಸ್ಟಿಸ್‌ ಫಾರ್‌ ಅಜಯ್‌

ಮಗುವಿನ ಸಾವಿಗೆ ನಿಮ್ಹಾನ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿ ಕುಟುಂಬಸ್ಥರು ‘ಜಸ್ಟಿಸ್ ಫಾರ್ ಅಜಯ್’ ಎಂಬ ಟ್ಯಾಗ್ ಲೈನ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಬ್ಯುಲೆನ್ಸ್ ಚಾಲಕರು ಸಹ ಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ.

ನಿಮ್ಹಾನ್ಸ್ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಏನಿದು ಘಟನೆ?

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಒಂದು ವರ್ಷದ ಪುಟ್ಟ ಕಂದಮ್ಮ ಹಾಸನದ ಮನೆಯೊಂದರಲ್ಲಿ ತಾಯಿ ಕೈಯಿಂದ ಜಾರಿ ಸುಮಾರು 10 ಅಡಿ ಮೇಲಿನಿಂದ ಕೆಳಗೆ ಬಿದ್ದಿತ್ತು. ಮಗುವಿನ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿತ್ತು. ತೀವ್ರವಾಗಿ ಗಾಯಗೊಂಡ ಮಗು ಅಸ್ವಸ್ಥಗೊಂಡಿತ್ತು. ಕೂಡಲೇ ಪೋಷಕರು ಮಗುವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಹಾಸನದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ಆಸ್ಪತ್ರೆಗೆ ತೆರಳುವಂತೆ ಪೋಷಕರಿಗೆ ತಿಳಿಸಿದ್ದರು. ನಿಮ್ಹಾನ್ಸ್ಆಡಳಿತ ಮಂಡಳಿಗೆ ಕರೆ ಮಾಡಿ ಮಗುವಿಗೆ ಬೆಡ್ ಕಾಯ್ದಿರಿಸುವಂತೆ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಬಳಿಕ, ಅವರೇ ಆಂಬುಲೆನ್ಸ್ನಲ್ಲಿ ಝೀರೋ ಟ್ರಾಫಿಕ್ ಮೂಲಕ ಮಗುವನ್ನು ಬೆಂಗಳೂರಿನ ನಿಮ್ಹಾನ್ಸ್ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದರು.

ಕೇವಲ 1:40 ನಿಮಿಷದಲ್ಲಿ ಹಾಸನದಿಂದ ಬೆಂಗಳೂರಿಗೆ ಮಗುವನ್ನು ಕರೆದುಕೊಂಡು ಬರಲಾಗಿತ್ತು. ಬಳಿಕ, ನಿಮ್ಹಾನ್ಸ್ಆಸ್ಪತ್ರೆಯ ಸಿಬ್ಬಂದಿ ಬೆಡ್ಇಲ್ಲವೆಂದು ಮಗುವಿಗೆ ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ನೀಡದೆ ಹಾಗೆಯೇ, ಆಂಬುಲೆನ್ಸ್ನಲ್ಲಿ ಬಿಟ್ಟಿದ್ದಾರೆ. ಸಾವು ಬದುಕಿನೊಡನೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡದೆ, ನಿಮ್ಹಾನ್ಸ್ಆಸ್ಪತ್ರೆಯ ವೈದ್ಯರು ದುರ್ವರ್ತನೆ ತೋರಿದ್ದರು.

ಈ ಸುದ್ದಿ ಓದಿದ್ದೀರಾ? ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಮಗು ನೋವಿನಿಂದ ಬಳಲುತ್ತಿದ್ದರು ಆಸ್ಪತ್ರೆಯ ವೈದ್ಯರು ಕನಿಷ್ಠ ಪ್ರಾಥಮಿಕ ತನಿಖೆಯನ್ನು ಸಹ ನಡೆಸಿಲ್ಲ. ಮಗುವಿಗೆ ಬೆಡ್ ನೀಡಿಲ್ಲ. ಆಂಬುಲೆನ್ಸ್ನಲ್ಲಿಯೇ ಅರ್ಧ ಗಂಟೆಗೂ ಹೆಚ್ಚು ಸಮಯ ಹಾಗೇ ಬಿಟ್ಟಿದ್ದಾರೆ. ಝೀರೋ ಟ್ರಾಫಿಕ್​​ನಲ್ಲಿ ಬಂದ ಮಗುವಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಲಭಿಸದ ಕಾರಣ ಮಗು ಸಾವನ್ನಪ್ಪಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X