ದಾವಣಗೆರೆ | ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹ

Date:

Advertisements

ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.

ಪರಿಶಿಷ್ಟ ಜಾತಿಗೆ ಉದ್ಯೋಗ, ಶಿಕ್ಷಣದಲ್ಲಿ ಕಲ್ಪಿಸಿರುವ ಶೇಕಡ 15%ರಷ್ಟು ಮೀಸಲಾತಿ, ಪರಿಶಿಷ್ಟ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಹಂಚಿಕೆಯಾಗಿಲ್ಲ. ಈ ತಾರತಮ್ಯ ನಿವಾರಣೆಗಾಗಿ ಕಳೆದ 30 ವರ್ಷಗಳಿಂದ ಸಂಘಟನೆಯ ಹೋರಾಟದ ಫಲವಾಗಿ 2005ರಲ್ಲಿ ಎ.ಜೆ.ಸದಾಶಿವ ಆಯೋಗ ರಚನೆಯಾಗಿತ್ತು. ಆದರೆ, ವರದಿಯನ್ನು ಜಾರಿಗೊಳಿಸದೇ ಸರ್ಕಾರಗಳು ನಿರಾಸಕ್ತಿ ತೋರುತ್ತಿವೆ.

ಅದೇ ರೀತಿ ಕಾಂತರಾಜ್ ಆಯೋಗದ ವರದಿಯನ್ನು ಕೂಡ ಒಂದು ಜಾತಿಗೆ ಸೀಮಿತವಾಗಿದ್ದುಕೊಂಡು ನ್ಯಾಯವನ್ನು ಕತ್ತಲೆಯಲ್ಲಿಡುವ ಪ್ರಯತ್ನವಾಗಿದೆ. ಈ ನಿಲುವನ್ನು ಕೈಬಿಟ್ಟು ಎಲ್ಲಾ ಜಾತಿಯ ಜನರ ಜನಸಂಖ್ಯಾ ಆಧರಿಸಿ ಮೀಸಲಾತಿ ಹಂಚಿಕೆ ಮಾಡುವಲ್ಲಿ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು.

Advertisements

ಸದಾಶಿವ ಆಯೋಗದ ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು. ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ಪರಿಶಿಷ್ಟ ಒಳ ಮೀಸಲಾತಿ ವರ್ಗಿಕರಣಕ್ಕೆ ಮುಂದಾಗಬೇಕು. 2008ರಲ್ಲಿ ಉಷಾ ಮೆಹ್ರ ಸಮಿತಿ ನೀಡಿರುವ ವರದಿಯಂತೆ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ. 341/3ನ್ನು ಸೇರಿಸಿ ಒಳಮೀಸಲಾತಿ ಅನುಷ್ಟಾನ ಮಾಡಿ  ಷೆಡ್ಯೂಲ್-9ರಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸುಪ್ರಿಂ ಕೋರ್ಟ್ 7 ನ್ಯಾಯಾಧೀಶರ ಪೀಠದಲ್ಲಿರುವ ವಿವಿಧ ರಾಜ್ಯಗಳ ಒಳಮೀಸಲಾತಿ ಪ್ರಕರಣಗಳ ಪರವಾಗಿ ಕೇಂದ್ರ ಸರ್ಕಾರ ಬಲವಾಗಿ ವಾದ ಮಂಡಿಸಿ ಒಳ ಮೀಸಲಾತಿ ವರ್ಗಿಕರಿಸಬೇಕು. ಕಾಂತರಾಜ್ ಆಯೋಗದ ವರದಿಯನ್ನು ಸದನದಲ್ಲಿ ಚರ್ಚಿಸಿ ಅಂಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಲಿ ಎಂದು ಮನವಿತ್ರದಲ್ಲಿ ತಿಳಿಸಿದ್ದಾರೆ.

ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಟಾನ ಮಾಡಿ ಸಂವಿಧಾನದ ಷೆಡ್ಯೂಲ್-9 ರಲ್ಲಿ ಸೇರಿಸಬೇಕು. ಮೀಸಲಾತಿ ಪ್ರಮಾಣವನ್ನು ಶೇ. 75%ಕ್ಕೆ ಹೆಚ್ಚಿಸಬೇಕು. ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ವರ್ಗದ ವಿದ್ಯಾರ್ಥಿ ನಿಲಯಗಳನ್ನು ಹೆಚ್ಚಿಸಬೇಕು. ಹಾಗೂ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಗಳನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಚ್.ಮಂಜುನಾಥ, ಸಂಘಟನೆಯ ವಿಭಾಗೀಯ ಕಾರ್ಯದರ್ಶಿ ನೇಹ ಮಲ್ಲೇಶ್ ತಾಲೂಕು ಅಧ್ಯಕ್ಷ ಡಿ.ವೀರಭದ್ರಪ್ಪ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ದಾದಾಪೀರ್, ಡಿ.ಶಿವಣ್ಣ, ಜಾಕೀರ್ ಹುಸೇನ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X