ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ಇಬ್ಬರು ಆರೋಪಿಗಳು ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ತಳ್ಳುವ ಗಾಡಿಯಲ್ಲಿ ನಾನಾ ಮಾದರಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಈ ಇಬ್ಬರು ಓರಿಸ್ಸಾ ಮೂಲದವರು ಎಂದು ತಿಳಿದುಬಂದಿದೆ.
ಕ್ರಮೇಣ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಪ್ರಾರಂಭ ಮಾಡಿದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಗುವಿಗೆ ಹೃದಯಾಘಾತವಾಗಿದೆ ಎಂದ ನಿಮ್ಹಾನ್ಸ್
ವಿದೇಶಿ ಪ್ರಜೆ ಬಂಧನ
2005ರಲ್ಲಿ ಬೆಂಗಳೂರಿಗೆ ಬಂದಿದ್ದ ವಿದೇಶಿ ಪ್ರಜೆಯೊಬ್ಬ ನಗರದಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದನು. ಪೊಲೀಸರು ಈತನನ್ನು ಬಂಧಿಸಿ, 180 ಗ್ರಾಂ ಎಮ್ಡಿಎಮ್ಎ ಜಪ್ತಿ ಮಾಡಿದ್ದಾರೆ.
2005ರಲ್ಲಿ ಬೆಂಗಳೂರಿಗೆ ಬಂದಿದ್ದ ಈತನ ಪಾಸ್‌ಪೋರ್ಟ್ ಅವಧಿ ಮುಗಿದಿತ್ತು. ಆದರೂ ಕೂಡ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದನು.
ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.