ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಕೆರೆಯಲ್ಲಿ ಗುರುವಾರ ನಡೆದಿದೆ.
ತಾಯಿ ವಿಜಯ ಲಕ್ಷ್ಮಿ(25), ಯಶವಂತ್ ನಾಯಕ(5), ಜಸ್ವಂತ್ ನಾಯಕ(1) ಮೃತರು.
ಕಳೆದ ಮೂರು ತಿಂಗಳ ಹಿಂದೆ ತನ್ನ ಗಂಡ ತೀವ್ರ ಅನಾರೋಗ್ಯದ ಹಿನ್ನೆಲೆ ಮರಣ ಹೊಂದಿದ್ದರ ಕಾರಣ ಮನನೊಂದು, ಜಿಗುಪ್ಸೆಗೊಂಡು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ; ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ
ತಾಯಿ ಹಾಗೂ ಒಂದು ವರ್ಷದ ಮಗುವಿನ ಶವ ದೊರಕಿದ್ದು, ಇನ್ನೊಬ್ಬ ಮಗನ ಶವ ಇನ್ನೂ ದೊರೆತಿಲ್ಲ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ಮಾಡುತ್ತಿದ್ದಾರೆ.
ಗುಬ್ಬಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.