ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟ ಧರಣಿ ಕೈಗೊಂಡಿದೆ.
ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಕಳೆದ ಏಳೆಂಟು ತಿಂಗಳಿಂದ ಪಿಂಚಣಿ ಹಣ ಬಿಡುಗಡೆಯಾಗಿಲ್ಲ.
ಅಲ್ಲದೇ ಅನೇಕ ದೇವದಾಸಿರ ಹೆಸರು ಪಟ್ಟಿಯಲ್ಲಿ ಇಲ್ಲ. ಹೆಸರು ಸೇರ್ಪಡೆಗೊಳಿಸಬೇಕು. ದೇವದಾಸಿ ಮಹಿಳೆಯರ ಮಕ್ಕಳಿಗೆ ಶಿಕ್ಷಣ ಒದಗಿಸುವದಾಗಿ ಹೇಳುವ ಸರ್ಕಾರ ಪ್ರತ್ಯೇಕ ವಸತಿ ನಿಲಯ ಪ್ರಾರಂಭಿಸಬೇಕು. ಹೆಚ್ಚುವರಿಯಾಗಿ ವಿದ್ಯಾರ್ಥಿ ವೇತನ ಹಾಗೂ ಸ್ವಯಂ ಉದ್ಯೋಗ ಪ್ರಾರಂಭಿಸಲು, ಸಬ್ಸಿಡಿ ಸಾಲಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.
ಧರಣಿಯಲ್ಲಿ ಒಕ್ಕೂಟದ ಮೋಕ್ಷಮ್ಮ, ವಿದ್ಯಾ ಪಾಟೀಲ್, ವಿರುಪಮ್ಮ, ಮಲ್ಲಮ್ಮ, ತಾಯಮ್ಮ, ಹುಲಿಗೆಮ್ಮ ಸೇರಿದಂತೆ ಅನೇಕ ಮಹಿಳೆಯರು ಭಾಗಿಯಾಗಿದ್ದರು.