ಹಿಂದುತ್ವ ಕುರಿತು ಟ್ವೀಟ್‌: ನಟ ಚೇತನ್ ಅಹಿಂಸಾಗೆ 14 ದಿನಗಳ ನ್ಯಾಯಾಂಗ ಬಂಧನ

Date:

Advertisements
  • ಬಾಬರಿ ಮಸೀದಿ ರಾಮನ ಜನ್ಮಭೂಮಿ ಅಲ್ಲ ಎಂದು ಟ್ವೀಟ್ ಮಾಡಿದ್ದ ನಟ
  • ಚೇತನ್ ಅಹಿಂಸಾ ವಿರುದ್ಧ ಬಲಪಂಥೀಯ ಸಂಘಟನೆಗಳಿಂದ ದೂರು

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ಅವರನ್ನು ಶೇಷಾದ್ರಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದು, ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

ತಮ್ಮ ನೇರ ಹೇಳಿಕೆಗಳಿಂದಲೇ ಸದಾ ಸುದ್ದಿಯಾಗುವ ಚೇತನ್ ಅಹಿಂಸಾ ಅವರು ಅವರು ಮಾರ್ಚ್‌ 20ರಂದು ಹಿಂದುತ್ವದ ಕುರಿತು ಟ್ವೀಟ್‌ವೊಂದನ್ನು ಮಾಡಿದ್ದರು. ಅವರ ಟ್ವೀಟ್‌ ಇದೀಗ ವಿವಾದಕ್ಕೀಡಾಗಿದೆ. ಶಿವಕುಮಾರ್ ಎಂಬುವವರ ದೂರಿನ ಆಧಾರದ ಮೇಲೆ ಶೇಷಾದ್ರಿಪುರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಹಿಂದುತ್ವದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನುವ ದೂರಿನ ಅನ್ವಯ ಚೇತನ್ ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ಫೆಬ್ರವರಿ ತಿಂಗಳಿನಲ್ಲೂ ಚೇತನ್ ಅವರನ್ನು ಬಂಧಿಸಲಾಗಿತ್ತು. ಒಂದು ವರ್ಷದ ಅಂತರದೊಳಗೆ ಎರಡನೇ ಬಾರಿ ಬಂಧನಕ್ಕೊಳಗಾಗಿದ್ದಾರೆ.

Advertisements

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಪೊಲೀಸ್ ಅಧಿಕಾರಿ, “ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಚೇತನ್ ಅವರನ್ನು ಅವರ ಮನೆಯಲ್ಲಿಯೇ ಮಂಗಳವಾರ ಬೆಳಗ್ಗೆ ಬಂಧಿಸಲಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದರು.

ಬಲಪಂಥೀಯ ಸಂಘಟನೆಗಳ ದೂರಿನ ಅನ್ವಯ ಐಪಿಸಿ ಸೆಕ್ಷನ್ 295ಎ, 505ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ಅನ್ವಯವೇ ನಟ ಚೇತನ್ ಅಹಿಂಸಾ ಬಂಧಿಸಲಾಗಿದೆ. ನ್ಯಾಯಾಯಲವು ಚೇತನ್ ಅಹಿಂಸಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಚೇತನ್ ಅಹಿಂಸಾ ಟ್ವೀಟ್​ನಲ್ಲೇನಿದೆ?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎಂದು ಸಾವರ್ಕರ್ ಸುಳ್ಳು ಹೇಳಿದ್ದರು” ಎಂದು ಚೇತನ್ ಅಹಿಂಸಾ ಟ್ವೀಟ್ ಮಾಡಿದ್ದಾರೆ.

https://twitter.com/ChetanAhimsa/status/1637866290009485314?s=20

ಮುಂದುವರೆದು, “1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮಭೂಮಿ ಎಂದು ಸುಳ್ಳು ಹೇಳಿದ್ದರು. ಇದೀಗ ಉರಿಗೌಡ-ನಂಜೇಗೌಡ ಎನ್ನುವವರು ಟಿಪ್ಪು ಸುಲ್ತಾನನನ್ನು ಕೊಂದಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದಿದ್ದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

Download Eedina App Android / iOS

X