119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶೇ.70.60ರಷ್ಟು ಮತದಾನವಾಗಿದೆ.
ರಾಜ್ಯದ 2.30 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ 119 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. ನಕ್ಸಲ್ ಪೀಡಿತ 13 ಕ್ಷೇತ್ರಗಳಲ್ಲಿ 4 ಗಂಟೆಗೆ ಮತದಾನ ಮುಕ್ತಾಯಗೊಂಡಿತು. ಉಳಿದ 106 ಇತರ ಕ್ಷೇತ್ರಗಳಲ್ಲಿ ನಿಗದಿತ ಅವಧಿಯವರೆಗೂ ಮತದಾನ ನಡೆಯಿತು.
ನಿಗದಿತ ಸಮಯಕ್ಕಿಂತ ಮೊದಲು ಸರತಿ ಸಾಲಿನಲ್ಲಿದ್ದವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ
ಆಡಳತಾರೂಢ ಬಿಆರ್‌ಎಸ್ ರಾಜ್ಯದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಸಲು ಸರ್ವಪ್ರಯತ್ನ ನಡೆಸಿದೆ.
ರಾಜ್ಯದಲ್ಲಿ ಬಿಜೆಪಿ ಕೂಡ ಹಲವು ರ‍್ಯಾಲಿಗಳಲ್ಲಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹಲವಾರು ಪ್ರಮುಖ ನಾಯಕರು ಪ್ರಚಾರವನ್ನು ನಡೆಸಿದರು.
ಗುರುವಾರ ನಡೆದ ಬಹುತೇಕ ಎಕ್ಸಿಟ್ ಪೋಲ್‌ಗಳು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಭವಿಷ್ಯ ನುಡಿದಿವೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.