ಮೈಸೂರು | ವಿಕಲಚೇತನ ಮಕ್ಕಳ ಆರೈಕೆಗೆ ಪ್ರೀತಿ ಹಾಗೂ ಬದ್ಧತೆಯಿರಬೇಕು: ಹೆಚ್ ಸಿ ಮಹದೇವಪ್ಪ

Date:

Advertisements

ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸವಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅಭಿಪ್ರಾಯಪಟ್ಟರು.

ಮೈಸೂರು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೈಸೂರು ಜಿಲ್ಲೆಯ ವಿಕಲಚೇತನರ ಕ್ರೀಡಾಕೂಟ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕಳೆದ 25 ವರ್ಷಗಳಿಂದ ಸರ್ಕಾರ ವಿಕಲಚೇತನ ಮಕ್ಕಳ ಕ್ರೀಡಾಕೂಟವನ್ನು ನಡೆಸುತ್ತಾ ಬಂದಿದೆ. ಈ ಹಿಂದೆ ಕೆಲವು ಸಂಘ ಸಂಸ್ಥೆಗಳು ಇದನ್ನು ನಡೆಸುತ್ತಿದ್ದವು. ಇಂದು ವಿಕಲಚೇತನರ ಕ್ರೀಡಾಕೂಟ ನಡೆಸಲು ಸರ್ಕಾರ ಪ್ರತಿ ಜಿಲ್ಲೆಗೂ 50 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಕ್ರೀಡಾಕೂಟ ಹಲವು ಬುದ್ಧಿಮಾಂದ್ಯ ಹಾಗೂ ವಿಕಲಚೇತನ ಮಕ್ಕಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಇಂತಹ ಮಕ್ಕಳನ್ನು ಪ್ರೀತಿಸುವ ಹಾಗೂ ಕ್ರೀಡೆಯ ಮೂಲಕ ರಂಜಿಸುವ ಉತ್ತಮ ಕೆಲಸವಾಗುತ್ತಿದೆ” ಎಂದರು.

Advertisements

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಮಾತನಾಡಿ, “ಕ್ರೀಡೆಯಲ್ಲಿ ವಿಶೇಷ ಚೇತನ ಮಕ್ಕಳು ಭಾಗವಹಿಸುತ್ತಿರುವುದು ವಿಶೇಷದಾಯಕವಾಗಿದೆ. ವಿಶೇಷ ಚೇತನ ಮಕ್ಕಳೂ ಕೂಡ ಅವರಲ್ಲಿರುವ ಸಾಮರ್ಥ್ಯವನ್ನು ಸಾಬೀತುಪಡಿಸುವ ಕೆಲಸ ಈ ಕ್ರೀಡಾ ಸ್ಪರ್ಧೆಯಲ್ಲಿ ಆಗಲಿದೆ. ಸೋಲು ಗೆಲುವಿನ ಪ್ರಶ್ನೆ ಬೇಡ. ಅವಕಾಶಗಳು ಮುಂದೆ ಬರುತ್ತವೆ. ಭಾಗವಹಿಸುವಿಕೆ ಮುಖ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣ ಕಡಿಮೆ ಮಾಡುತ್ತವೆ: ಡಾ.ಗೀತಾ ಚಿಟಗುಬ್ಬಿ

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜ್ಯೋತಿ ಕೆ.ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ ಬಸವರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X