ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಮುಕ್ತವಾಗಿದೆ: ಸಚಿವ ಎಂ ಸಿ ಸುಧಾಕರ್

Date:

Advertisements
  • ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದೇನೆ
  • ಅತಿಥಿ ಉಪನ್ಯಾಸಕರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ: ಭರವಸೆ

ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಮುಕ್ತವಾಗಿದ್ದು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದೇನೆ ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.

ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಸಂಘಟನೆಗಳೊಂದಿಗೆ ಶುಕ್ರವಾರ ಸಮಲೋಚನೆ ನಡೆಸಿದ ಸಚಿವರು, ಅತಿಥಿ ಉಪನ್ಯಾಸಕರ ವಿಚಾರದಲ್ಲಿ ನಮ್ಮ ಸರ್ಕಾರ ಸಹಾನುಭೂತಿ ಹೊಂದಿದೆ. ಮುಖ್ಯಮಂತ್ರಿಗಳು ಸಹ ಈ ವಿಚಾರದಲ್ಲಿ ಸ್ಪಷ್ಟತೆ ಹೊಂದಿದ್ದಾರೆ. ಹಾಗಾಗಿ ಮುಷ್ಕರವನ್ನು ಕೈ ಬಿಟ್ಟು ತರಗತಿಗಳಿಗೆ ತೆರಳಿ” ಎಂದು ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡಿದರು.

“2013-18ರ ಅವಧಿಯಲ್ಲಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಿತ್ತು. ಹಾಗೆ ಈ ಅವಧಿಯಲ್ಲೂ ಸಹ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಾವು ನಡೆದುಕೊಳ್ಳಲು ಬದ್ಧರಾಗಿದ್ದೇವೆ” ಎಂದರು.

Advertisements

” ಅತಿಥಿ ಉಪನ್ಯಾಸಕರ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಡೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಪ್ರಸಕ್ತ ಶೇಕಡ 70ರಷ್ಟು ಅತಿಥಿ ಉಪನ್ಯಾಸಕರು ಈಗ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಮೇಲಿನ ಕಾರ್ಯದೊತ್ತಡ ನನಗೆ ತಿಳಿದಿದೆ. ತಮ್ಮನ್ನ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಕಾಶಿ ಸುರಂಗ ಕುಸಿತದಲ್ಲಿವೆ ಹಿಂದು-ಮುಸ್ಲಿಮ್ ಏಕತೆ ಪಾಠಗಳು

“ತಮ್ಮ ಬೇಡಿಕೆ ಈಡೇರಿಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆ ಮತ್ತು ಕಾನೂನು ಇಲಾಖೆಯ ಜೊತೆ ಚರ್ಚಿಸಿ ತೀರ್ಮಾನಿಸಬೇಕಾಗಿದೆ. ತಮ್ಮಗಳ ಸೇವೆಯನ್ನು ಉಳಿಸಿಕೊಂಡು ತಮಗೆ ಅನುಕೂಲವಾಗುವಂತೆ ಒಳ್ಳೆಯದನ್ನು ಮಾಡಬೇಕೆಂಬುದು ನಮ್ಮ ಉದ್ದೇಶ” ಎಂದರು.

ಇದೇ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದಾಗ ತಕ್ಷಣವೇ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅತಿಥಿ ಉಪನ್ಯಾಸಕರ ವಿವಿಧ ಸಂಘಟನೆಗಳ ನೂರಕ್ಕೂ ಹೆಚ್ಚು ಮಂದಿ ಪದಾಧಿಕಾರಿಗಳು ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಚರ್ಚೆಗೂ ಮುನ್ನ ಅತಿಥಿ ಉಪನ್ಯಾಸಕ ಸಂಘಟನೆಯ ವಿವಿಧ ಮುಖಂಡರು ತಮ್ಮ ಬೇಡಿಕೆಗಳನ್ನು ಕುರಿತಂತೆ ಸವಿಸ್ತಾರವಾಗಿ ಪ್ರಸ್ತಾಪಿಸಿದರು. ಚರ್ಚೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾಶಂಕರ್, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಅಪ್ಪಾಜಿಗೌಡ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X