ಬೆಂಗಳೂರು | ಎಲ್ಲ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

Advertisements

ಸೌತ್ ಎಂಡ್ ಸರ್ಕಲ್‌ನಲ್ಲಿರುವ ಕೆಂಪೇಗೌಡ ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ (ಡಿಜಿಟಲೀಕರಣ) ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಗರದಾದ್ಯಂತ ತ್ವರಿತಗತಿಯಲ್ಲಿ ಎಲ್ಲ ಆಸ್ತಿಗಳನ್ನು ಡಿಜಿಟೈಸೇಷನ್ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ಕಂದಾಯ ಕಚೇರಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ, ರಸ್ತೆಗಳ ಪರಿಸ್ಥಿತಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ಪರಿಶೀಲನೆ ನಡೆಸಿದರು. ಈ ವೇಳೆ, ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಆಸ್ತಿ ಪುಸ್ತಕಗಳ ಸ್ಕ್ಯಾನಿಂಗ್ ವೀಕ್ಷಿಸಿ, ಮುಖ್ಯ ಆಯುಕ್ತರಿಂದ ಮಾಹಿತಿ ಪಡೆದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಲಾಗುತ್ತದೆ. ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ಬಳಿಕ ಸಾಫ್ಟ್ ವೇರ್‌ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ. ಇದನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್‌ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದು” ಎಂದು ಮಾಹಿತಿ ನೀಡಿದರು.

Advertisements

ಸಿಲ್ವರ್ ಜೂಬ್ಲಿ ಪಾರ್ಕ್(ಎಸ್.ಜೆ.ಪಿ) ಜಂಕ್ಷನ್‌ನಿಂದ ಎಸ್.ಪಿ ರಸ್ತೆ ಮೂಲಕ ಹಡ್ಸನ್ ರಸ್ತೆ (ಪಾದಚಾರಿ‌ ಮೇಲ್ಸೇತುವೆಯ ವರೆಗೆ)ಯವರೆಗೆ 500 ಮೀಟರ್ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದ್ದು, ತ್ವರಿತವಾಗಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಧರ್ಮರಾಯ ಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯು ತುಂಬಾ ಹಾಳಾಗಿದ್ದು, ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿವಿಕೆ ಅಯ್ಯಂಗರ್ ರಸ್ತೆ ಪರಿಶೀಲನೆ

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿವಿಕೆ ಅಯ್ಯಂಗಾರ್ ರಸ್ತೆ ಹಾಗೂ ಒಟಿಸಿ ರಸ್ತೆಯ ನಡುವಿನ ಚಿಕ್ಕಪೇಟೆ ವೃತ್ತದ ಬಳಿ ಬರುವ ಕ್ರಾಸ್ ರಸ್ತೆಗಳಾದ ಕಿಲಾರಿ ರಸ್ತೆ, ಆರ್.ಟಿ ಸ್ಟ್ರೀಟ್ ರಸ್ತೆ, ಎ.ಎಸ್ ಆಚಾರ್ ಸ್ಟ್ರೀಟ್ ರಸ್ತೆಯನ್ನು ಕಾಂಪ್ರೆನ್ಸಿವ್ ಡೆವಲಪ್ಮೆಂಟ್ ಅಡಿಯಲ್ಲಿ ವೈಟ್ ಟಾಪಿಂಗ್, ಪಾದಚಾರಿ ಮಾರ್ಗ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಚಿಕ್ಕಪೇಟೆ ವೃತ್ತದಲ್ಲಿ ಅನಧಿಕೃತವಾಗಿ ಓಎಫ್.ಸಿ ಕೇಬಲ್ ಗಳು ಅಳವಡಿಸಿರುವುದನ್ನು ಪರಿಶೀಲಿಸಿ ಅದನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದರು. ಜತೆಗೆ ಬೀದಿ ಬದಿ ದೀಪಗಳನ್ನು ಅಳವಡಿಸಲು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಮತದಾರ ಪಟ್ಟಿಗೆ ಸೇರ್ಪಡೆ; ಬಿಬಿಎಂಪಿ ವಿಶೇಷ ನೋಂದಣಿ ಅಭಿಯಾನ

ಮೆಜೆಸ್ಟಿಕ್- ಬಿಎಂಟಿಸಿ ಒಳ ರಸ್ತೆ ಪರಿಶೀಲನೆ

ಧನ್ವಂತ್ರಿ ರಸ್ತೆ ಮತ್ತು ಗುಬ್ಬಿ ತೋಟದಪ್ಪ ರಸ್ತೆಯ ನಡುವಿನ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಪ್ರಮುಖ ರಸ್ತೆಯನ್ನು ಬಿಎಂಟಿಸಿಯಿಂದ ಪಾಲಿಕೆಗೆ ಹಸ್ತಾಂತರಗೊಳಿಸಿಕೊಂಡು ವೈಟ್ ಟಾಪಿಂಗ್ ರಸ್ತೆಯನ್ನಾಗಿ‌ ನಿರ್ಮಾಣ ಮಾಡಲು ಸೂಚಿಸಿದರು. ಮೆಜೆಸ್ಟಿಕ್ ರಸ್ತೆ ತುಂಬಾ ಹಾಳಾಗಿದ್ದು, ತಾತ್ಕಾಲಿಕವಾಗಿ ದುರಸ್ತಿಪಡಿಸಿ ನಂತರ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಕಂದಾಯ ವಿಭಾಗದ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಕಂದಾಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X