ಮೈತ್ರಿ ಕಗ್ಗಂಟು | ದೇವೇಗೌಡರೇ ಘೋಷಿಸಿದ್ರೂ ಪ್ರಜ್ವಲ್‌ಗೆ ಸಿಗಲ್ವಾ ಹಾಸನ ಟಿಕೇಟು?

Date:

Advertisements

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿಕೊಂಡಿದೆ.  ಜೆಡಿಎಸ್‌-ಬಿಜೆಪಿ ಮೈತ್ರಿಯೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಈ ಮೈತ್ರಿ ಕಗ್ಗಂಟಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಜೆಡಿಎಸ್‌ ತನ್ನ ಪ್ರಾಬಲ್ಯ ಕಾಪಾಡಿಕೊಳ್ಳಲು ಯತ್ನಿಸುತ್ತಿದ್ದರೆ, ಬಿಜೆಪಿ ತನ್ನ ಪ್ರಾಬಲ್ಯ ವೃದ್ಧಿಸಿಕೊಳ್ಳಲು ಹವಣಿಸುತ್ತಿದೆ. ಹೀಗಾಗಿ, ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಟಿಕೆಟ್‌ಗಾಗಿ ಎರಡೂ ಪಕ್ಷಗಳ ನಡುವೆ ತಿಕ್ಕಾಟ ಶುರುವಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಸದ್ಯ, ಮಂಡ್ಯ ಮತ್ತು ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಕ್ಷೇತ್ರ ಹಂಚಿಕೆ ಸಂಬಂಧ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ತಿಕ್ಕಾಟ ಶುರುವಾಗಿದೆ. ಇದೀಗ, ಅದು ಹಾಸನಕ್ಕೂ ವ್ಯಾಪಿಸುವ ಸಾಧ್ಯತೆಯನ್ನು ಹೆಚ್ಚಿಸಿದೆ. ಆದರೆ, ಹಾಸನ ಕ್ಷೇತ್ರ ಜೆಡಿಎಸ್‌ ಪಾಲಿಗೆ ದೊರೆಯುತ್ತದೆ ಎಂಬುದು ಬಹುತೇಕ ಖಚಿತವಾದಂತಿದೆ. ಆದರೂ, ಸ್ಥಳೀಯ ಬಿಜೆಪಿಗರು ಜೆಡಿಎಸ್‌ ಅಭ್ಯರ್ಥಿಯ ವಿಚಾರದಲ್ಲಿ ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆಗಳೂ ದಟ್ಟವಾಗಿವೆ.

ಡಿಸೆಂಬರ್ 1ರಂದು ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದಲ್ಲಿ ನಡೆದ ಜೆಡಿಎಸ್‌ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಹಾಸನಕ್ಕೆ ಪ್ರಜ್ವಲ್‌ ರೇವಣ್ಣ ಅವರೇ ಅಭ್ಯರ್ಥಿಯೆಂದು ಜೆಡಿಎಸ್‌ ವರಿಷ್ಠ ಎಚ್.ಡಿ ದೇವೇಗೌಡ ಪ್ರಕಟಿಸಿದ್ದಾರೆ.

Advertisements

ಸಭೆಯಲ್ಲಿ ಮಾತನಾಡಿರುವ ಅವರು, ”ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸೋಣ. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ದೇಶದ ದೊಡ್ಡ ವ್ಯಕ್ತಿಯಾಗಿ ಬೆಳೆದಿರುವ ಮೋದಿ ಅವರೊಂದಿಗೆ ಜೆಡಿಎಸ್ ಸೇರಿದ್ದು, ಬಿಜೆಪಿ ಜೊತೆ ಒಟ್ಟಾಗಿ ಕೆಲಸ ಮಾಡೋಣ. ಹಾಸನದ ಹಾಲಿ ಸಂಸದರನ್ನು ಗೆಲ್ಲಿಸಲು ಶ್ರಮಿಸೋಣ” ಎಂದಿದ್ದರು.

ಅವರ ಈ ಹೇಳಿಕೆಯು ಹಾಸನ ಲೋಕಸಭಾ ಕ್ಷೇತ್ರವು ಜೆಡಿಎಸ್‌ ಪಾಲಿಗೆ ಬರುತ್ತದೆ. ಮಾತ್ರವಲ್ಲದೆ, ಪ್ರಜ್ವಲ್ ರೇವಣ್ಣ ಅವರೇ ಮುಂದಿನ ಅಭ್ಯರ್ಥಿ ಕೂಡ ಎಂಬುದನ್ನು ಸ್ಪಷ್ಟವಾಗಿ ಹೇಳಿದೆ.

ಆದರೆ, ದೇವೇಗೌಡರ ಹೇಳಿಕೆಗೆ ಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್‌ ಅವರನ್ನು ದೇವೇಗೌಡರು ಮಾತ್ರವೇ ಘೋಷಿಸಲು ಸಾಧ್ಯವಿಲ್ಲ. ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌, ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಬಿಜೆಪಿಗರು ಹೇಳಿದ್ದಾರೆ.

ಪ್ರಜ್ವಲ್ 1

ದೇವೇಗೌಡರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಮಾಧ್ಯಮ ವಕ್ತಾರ ಜಿ ದೇವರಾಜೇಗೌಡ, “ದೇವೇಗೌಡರ ಹೇಳಿಕೆ ಸರಿಯಲ್ಲ. ಪ್ರಜ್ವಲ್ ರೇವಣ್ಣ ಅವರು ಎನ್​ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯಲ್ಲ. ಬಿಜೆಪಿ ರಾಜ್ಯಾಧ್ಯಕ್ಷರೂ ಜೆಡಿಎಸ್‌ ನಾಯಕರೊಂದಿಗೆ ಕೂತು ಜಂಟಿಯಾಗಿ ಹೇಳಿಕೆ ನೀಡಿದರೆ ಮಾತ್ರ, ಅವರು ಮೈತ್ರಿಕೂಟದ ಅಭ್ಯರ್ಥಿಯಾಗುತ್ತಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಇನ್ನು, ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸೀಟು ಹಂಚಿಕೆಯ ಮಾತುಗಳು ನಡೆದಿಲ್ಲ. ಹಾಸನವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಾಗಿ ಬಿಜೆಪಿ ಘೋಷಿಸಿಲ್ಲ. ಆದರೂ, ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿಕೊಳ್ಳುತ್ತಿದೆ. ಈ ನಡುವೆ, ದೇವೇಗೌಡ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ, ಅವರಿಗಾಗಿ ಕ್ಷೇತ್ರ ಬಿಟ್ಟುಕೊಡುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಹೇಳುತ್ತಿದ್ದಾರೆ.

ಸದ್ಯ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಸೀಟು ಹಂಚಿಕೆ ವೇಳೆ ಏನಾಗಲಿದೆ; ಒಂದು ವೇಳೆ, ಹಾಸನ ಜೆಡಿಎಸ್‌ ಪಾಲಿಗೆ ಸಿಕ್ಕರೂ, ಕಳೆದ ಚುನಾವಣೆ ವೇಳೆ, ಚುನಾವಣಾ ಅಕ್ರಮ ಎಸಗಿದ್ದ ಆರೋಪವೂ ಪ್ರಜ್ವಲ್ ರೇವಣ್ಣ ವಿರುದ್ಧ ಇದೆ. ಹೀಗಾಗಿ, ಹಾಸನದಲ್ಲಿ ಪ್ರಜ್ವಲ್‌ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಒಪ್ಪುವುದೇ ಎಂಬ ಕುತೂಹಲಕಾರಿ ಸಂಗತಿಗಳು ಮುಂದಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X