ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವಣ್ಣನ ಕಂಚಿನ ಪುತ್ಥಳಿ ಕಾಮಗಾರಿಯಲ್ಲಿ ಅತ್ಯಾಚಾರ ಆರೋಪಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರು ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಎಚ್ ಏಕಾಂತಯ್ಯ ಆರೋಪಿಸಿದ್ದಾರೆ. ಚಿತ್ರದುರ್ಗ ಚಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಹಿಂಭಾಗದಲ್ಲಿ ಬಸವಣ್ಣ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. 28.20 ಕೋಟಿ ರೂ.ಗಳ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಸರ್ಕಾರದ ಅನುದಾನವನ್ನು ಶಿವಮೂರ್ತಿ ಮುರುಘಾ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸರ್ಕಾರದ ಅನುದಾನದಲ್ಲಿ ಪುತ್ಥಳಿಗೆ 35 ಕೋಟಿ ರೂ. ನೀಡಲಾಗಿದೆ. ಅದರಲ್ಲಿ, ಈಗಾಗಲೇ 24.50 ಕೋಟಿ ರೂ. ವೆಚ್ಚವಾಗಿದೆ ಎಂದು ತಿಳಿದುಬಂದಿದೆ. ಟೆಂಡರ್ ಕರೆಯದೇ 4 ಕೋಟಿ ರೂ. ಮೌಲ್ಯದ ಕಬ್ಬಿಣ ಮತ್ತು ಸಿಮೆಂಟ್ ಖರೀದಿಸಿದ್ದಾರೆ. ನಿಯಮ ಮೀರಿ ಖಾಸಗಿ ಸಂಸ್ಥೆ ‘ಜಂಪನ್ ಕನ್‌ಸ್ಟ್ರಕ್ಷನ್ ಪ್ರೈವೆಟ್ ಲಿಮಿಟೆಡ್’ಗೆ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸರ್ಕಾರದ ಅನುದಾನವನ್ನು ಶಿವಮೂರ್ತಿ ಮುರುಘಾ ಅವರು ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಏಕಾಂತಯ್ಯ ಆಗ್ರಹಿಸಿದ್ದಾರೆ.